Kannadaprabha The New Indian Express
ಸಿಪಿಇಸಿಯನ್ನು ಗುರಿಯಾಗಿರಿಸಿಕೊಂಡು ಭಾರತದಿಂದ ಆರ್ಥಿಕ ಭಯೋತ್ಪಾದನೆ: ಪಾಕ್ 
By select 
06 Oct 2017 02:00:00 AM IST

ಇಸ್ಲಾಮಾಬಾದ್: ಭಯೋತ್ಪಾದನೆಯನ್ನು ತಡೆಗಟ್ಟಲು ಸಾಧ್ಯವಾಗದ ಪಾಕಿಸ್ತಾನ ಭಾರತದ ವಿರುದ್ಧ ಮತ್ತೊಮ್ಮೆ ಆರೋಪ ಮಾಡಿದ್ದು, ಪಾಕಿಸ್ತಾನದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಭಾರತ ಭಯೋತ್ಪಾದನೆ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದೆ. 

ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ನಫೀಜ್ ಝಕಾರಿಯಾ, ಭಾರತದ ವಿರುದ್ಧ ಆರೋಪ ಮಾಡಿದ್ದು, ತೆಹ್ರೀಕ್-ಇ-ತಾಲೀಬಾನ್ ಪಾಕಿಸ್ತಾನ್(ಟಿಟಿಪಿ) ಹಾಗೂ ಜಮಾತ್-ಉಲ್- ಅಹ್ರಾರ್(ಜೆಯುಎ) ಉಗ್ರ ಸಂಘಟನೆಗಳನ್ನು ಪಾಕಿಸ್ತಾನದ ವಿರುದ್ಧ ಪ್ರಯೋಗಿಸುತ್ತಿದೆ ಎಂದು ಆರೋಪಿಸಿದ್ದಾರೆ. 

ಇನ್ನು ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಆಸೀಫ್ ಘಫೂರ್ ಸಹ ಭಾರತದ ವಿರುದ್ಧ ಆರೋಪ ಮಾಡಿದ್ದು, ಭಾರತ ಸಿಪಿಇಸಿಯನ್ನು ಗುರಿಯಾಗಿರಿಸಿಕೊಂಡು ಆರ್ಥಿಕ ಭಯೋತ್ಪಾದನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಯನ್ನು ವಿರೋಧಿಸುವ ಮೂಲಕ ಭಾರತ ಪಾಕಿಸ್ತಾನದ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಆರ್ಥಿಕ ಭಯೋತ್ಪಾದನೆ ಮಾಡುತ್ತಿದೆ ಎಂದು ಘಫೂರ್ ಹೇಳಿದ್ದಾರೆ. 

Copyright � 2012 Kannadaprabha.com