ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಕೋರಮಂಗಲದ ಕೆ.ಎಸ್.ಆರ್.ಪಿ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್, ನಟ ಯಶ್, ನಟಿ ಐಂದ್ರಿತಾ ರೈ, ಕವಿ ನಿಸಾರ್ ಅಹಮದ್ ಹುತಾತ್ಮ ಯೋಧ ಸ್ಮಾರಕಕ್ಕೆ ಪುಷ್ಪಗುಚ್ಛ ಇಟ್ಟು ವಂದಿಸಿದರು.