Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
PM Modi and Rahul gandhi

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್

Another civilian abducted, killed by terrorists in Jammu And Kashmir

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಮತ್ತೋರ್ವ ನಾಗರಿಕನ ಅಪಹರಣ, ಹತ್ಯೆ

Delhi Chief Secretary Anshu Prakash, who accused Kejriwal of assault transferred to telecom dept

ಸಿಎಂ ಕೇಜ್ರಿವಾಲ್ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಎತ್ತಂಗಡಿ!

HDK and Parameshwara

ಸಿಎಂ ಆಗಲು ಸಿದ್ಧ: ಪರಮೇಶ್ವರ್ ಹೇಳಿಕೆಗೆ ಹೆಚ್'ಡಿಕೆ ಸಮರ್ಥನೆ

Dy CM Parameshwara

ಹೈಕಮಾಂಡ್ ಹೇಳಿದರೆ ಸಿಎಂ ಆಗಲು ಸಿದ್ಧ: ಉಪ ಮುಖ್ಯಮಂತ್ರಿ ಪರಮೇಶ್ವರ್

DK Shivakumar Reacts On DCM Parameshwar

ಜೆಡಿಎಸ್ ಗೆ 5 ವರ್ಷ ಸಿಎಂ ಸ್ಥಾನ ಬರೆದುಕೊಟ್ಟಿದ್ದೇವೆ, ಮಾತು ತಪ್ಪುವ ಮಾತೇ ಇಲ್ಲ: ಸಚಿವ ಡಿಕೆ ಶಿವಕುಮಾರ್

Chinmayi Sripaada

ಮೀಟೂ ಆರೋಪ: ಗಾಯಕಿ ಚಿನ್ಮಯಿ ಶ್ರೀಪಾದ್ ಗೆ ತಮಿಳುನಾಡು ಡಬ್ಬಿಂಗ್ ಯೂನಿಯನ್ ಗೇಟ್ ಪಾಸ್

File photo

2 ವಾರಗಳಲ್ಲಿ ಸಂಪುಟ ವಿಸ್ತರಣೆ: ಕಾಂಗ್ರೆಸ್

Arun Jaitley

ಲೂಟಿಕೋರರು ತಮ್ಮನ್ನು ರಕ್ಷಿಸಿಕೊಳ್ಳಲು ಸಿಬಿಐಗೆ ದಿಗ್ಭಂದನ ಹಾಕುತ್ತಿದ್ದಾರೆ: ಅರುಣ್ ಜೇಟ್ಲಿ

CM Vasundara Raje and Manvendra Singh

ರಾಜಸ್ಥಾನ ಚುನಾವಣೆ: ವಸುಂಧರಾ ರಾಜೇ ವಿರುದ್ಧ ಜಸ್ವಂತ್ ಸಿಂಗ್ ಪುತ್ರ ಮನ್ವೇಂದ್ರ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ

Virat Kohli

ಮಾಧ್ಯಮ ಮತ್ತು ಅಭಿಮಾನಿಗಳ ಜತೆ ವಿನಯದಿಂದ ವರ್ತಿಸಿ: ಕೊಹ್ಲಿಗೆ ಬಿಸಿಸಿಐ ಖಡಕ್ ಸೂಚನೆ

Brendon McCullum-Corey Anderson

ಆರ್‌ಸಿಬಿಯಿಂದ ಹೊರಬಿದ್ದ ಸ್ಫೋಟಕ ಕ್ರಿಕೆಟಿಗರು ಟ್ವೀಟ್ ಮೂಲಕ ಹೇಳಿದ್ದೇನು?

Avoid confrontation with Kohli, du Plessis tells Australia

ಕೊಹ್ಲಿಯನ್ನು ಕೆಣಕದಿರಿ, 'ಸೈಲೆಂಟ್ ಟ್ರೀಟ್ ಮೆಂಟ್' ಕೊಡಿ: ಆಸಿಸ್ ಗೆ ಡು ಪ್ಲೆಸಿಸ್ ಸಲಹೆ

ಮುಖಪುಟ >> ರಾಜಕೀಯ

ಟಿಪ್ಪು ವಿರೋಧಿಗಳೇ.. ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಯಾವ ಗುಂಪಿಗೆ ಸೇರಿಸ್ತಿರಿ?: ಸಿದ್ದರಾಮಯ್ಯ

ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್ ಟ್ರಬಲ್ ಶೂಟರ್
Siddaramaiah Slams BJP Leaders in Twitter For Opposing Tippu Jayanti

ಸಂಗ್ರಹ ಚಿತ್ರ

ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತಿರುವಂತೆಯೇ ಅತ್ತ ಕಾಂಗ್ರೆಸ್ ಮುಖಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಟಿಪ್ಪು ಜಯಂತಿಗೆ ವಿರೋಧ ಮುಂದುವರೆದಿರುವಂತೆಯೇ ಅತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಟಿಪ್ಪು ಜಯಂತಿ ಶುಭಕೋರಿದ್ದು, ಸರಣಿ ಟ್ವೀಟ್ ಮೂಲಕ ಟಿಪ್ಪುವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ ಟಿಪ್ಪು ಜಯಂತಿ ವಿರೋಧಿಗಳನ್ನೂತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

'ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ. ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಸಿಂಧೂರ ಲಕ್ಷ್ಮಣ, ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಂತೆಯೇ ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಕಿಡಿಕಾರಿದ್ದಾರೆ.

ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ, ಜಾತ್ಯತೀತ ಧೋರಣೆ, ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ, ಹಾಡುಗಳೇ ನಿಜವಾದ ಇತಿಹಾಸ ಎಂದು ತಿಳಿಸಿದ್ದಾರೆ. ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು. ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ. ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ ಎಂದು ಕಿಡಿಕಾರಿದ್ದಾರೆ.
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Bengaluru, Tippu Jayanti, Siddaramaiah, Congress, BJP, ಬೆಂಗಳೂರು, ಟಿಪ್ಪು ಜಯಂತಿ, ಸಿದ್ದರಾಮಯ್ಯ, ಕಾಂಗ್ರೆಸ್, ಬಿಜೆಪಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS