ಎಚ್ ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ) 
ವಿಶ್ಲೇಷಣೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಕಿಂಗ್ ಮೇಕರ್ ಕನಸು ಭಗ್ನ, 3ನೇ ಸ್ಥಾನಕ್ಕೆ ಕುಸಿದ ಜೆಡಿಎಸ್!

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿದೆ.

ಹೌದು.. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಆಡಳಿತಾರೂಢ ಬಿಜೆಪಿ 72 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ಕಳೆದ ಬಾರಿಗಿಂತ ಈ ಬಾರಿ 30ಕ್ಕೂ ಅಧಿಕ ಸ್ಥಾನ ಗಳಲ್ಲಿ ಹಿನ್ನಡೆ ಅನುಭವಿಸಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿನ ಫಲಿತಾಂಶಗಳು ಈ ಬಾರಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದ್ದವು. ಅಂತೆಯೇ ಈ ಬಾರಿಯೂ ಜೆಡಿಎಸ್ ಕಿಂಗ್ ಮೇಕರ್ ಆಗಬಹುದು ಎಂದು ಸಮೀಕ್ಷೆಗಳಲ್ಲಿ ಬಣ್ಣಿಸಲಾಗಿತ್ತು.

ಆದರೆ ಈ ಬಾರಿ ಜೆಡಿಎಸ್ 25 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಬಾರಿಗಿಂತ ಈ ಬಾರಿ ಜೆಡಿಎಸ್ 12 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ಆ ಮೂಲಕ ಜೆಡಿಎಸ್ ನ ಕಿಂಗ್ ಮೇಕರ್ ಕನಸು ಭಗ್ನಗೊಂಡಿದ್ದು, ಮೂರನೇ ಸ್ಥಾನಕ್ಕೆ ಸಮಾಧಾನ ಪಟ್ಟುಕೊಳ್ಳುವಂತಾಗಿದೆ.

ಎಚ್‌ಡಿ ದೇವಗೌಡ ನೇತೃತ್ವದ ಪಕ್ಷವು 2018 ರಲ್ಲಿ 37 ಸ್ಥಾನಗಳನ್ನು ಗೆದ್ದಿತು ಮತ್ತು ಶೇಕಡಾ 20 ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿತ್ತು. ಆದರೆ ಈ ಬಾರಿ ಇದಕ್ಕೆ ವ್ಯತಿರಿಕ್ತವಾಗಿ, ಪಕ್ಷವು ಪ್ರಸ್ತುತ 25 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ ಮತ್ತು ಅದರ ಮತಗಳ ಪ್ರಮಾಣ ಕೂಡ ಶೇ.13ಕ್ಕೆ ಕುಸಿತವಾಗಿದೆ.

ಕುತೂಹಲಕಾರಿ ಸಂಗತಿಯೆಂದರೆ, ಈ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ತನ್ನ ಸ್ಥಾನಗಳ ಎಣಿಕೆಯಲ್ಲಿ ತೀವ್ರ ಕುಸಿತವನ್ನು ಕಂಡಿದ್ದರೂ, ಇದುವರೆಗೆ ತನ್ನ ಮತಗಳ ಹಂಚಿಕೆಯಲ್ಲಿ ಕುಸಿತವನ್ನು ಕಂಡಿಲ್ಲ. ಮತ್ತೊಂದೆಡೆ, ಕಾಂಗ್ರೆಸ್ ತನ್ನ ಮತ ಹಂಚಿಕೆಯಲ್ಲಿ  ಶೇ.5 ರಷ್ಚು ಏರಿಕೆ ಕಂಡಿದೆ. ಇದು ಕಾಂಗ್ರೆಸ್ಸಿನ ಲಾಭ ಹೆಚ್ಚಾಗಿ ಜೆಡಿಎಸ್ ಪಕ್ಷದ ಪಾಲಿನಿಂದ ಬಂದಿದ್ದಾಗಿದೆ ಎಂಬುದನ್ನು ಸೂಚಿಸುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT