ಸಾಂದರ್ಭಿಕ ಚಿತ್ರ 
ಕೃಷಿ-ಪರಿಸರ

ಕರ್ನಾಟಕದತ್ತ ಧಾವಿಸುತ್ತಿರುವ ನೈಋತ್ಯ ಮುಂಗಾರು

ನೈಋತ್ಯ ಮುಂಗಾರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದ್ದು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದತ್ತ ಮುನ್ನುಗ್ಗಲಿದೆ ಎಂದು ಹವಾಮಾನ ಇಲಾಖೆ

ಬೆಂಗಳೂರು: ನೈಋತ್ಯ ಮುಂಗಾರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದ್ದು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದತ್ತ ಮುನ್ನುಗ್ಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕರ್ನಾಟಕದ ಬಹುತೇಕ ಕರಾವಾಳಿ ಪ್ರದೇಶಗಳಲ್ಲಿ ಹಾಗು ರಾಜ್ಯದ ಒಳ ಭಾಗದ ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

ಜೂನ್ ೧ ರಿಂದ ಬೆಂಗಳೂರಿನಲ್ಲಿ ೩೬ ಮಿಲಿ ಮೀಟರ್ ಮಳೆಯಾಗಿದೆ. ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ೫೦ ಎಂಎಂ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ೮ ಎಂಎಂ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರುನಲ್ಲಿ ಗರಿಷ್ಠ ಉಷ್ಣಾಂಶ ೩೧ ಡಿಗ್ರೀ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ ೨೧ ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video