ಭಕ್ತಿ-ಜ್ಯೋತಿಷ್ಯ

ಮಾಸದ ಮಹಿಮೆ

ಕೃಷ್ಣ ಭಗವದ್ಗೀತೆಯಲ್ಲಿ ಮಾಸಗಳನ್ನು ಕುರಿತು ಹೇಳುವಾಗ ಧನುರ್ಮಾಸದ ಮಹಾತ್ಮೆಗೆ ವಿಶೇಷ ಒತ್ತು ನೀಡಿ 'ಮಾಸಾನಾಂ ಮಾರ್ಗಶೀರ್ಷೋಸ್ಮಿ' ಎಂದು ಅಪ್ಪಣೆ ಕೊಡಿಸಿದ್ದಾನೆ.
ಸೂರ್ಯ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಬೇಕಾದರೆ ಒಂದು ತಿಂಗಳು ಬೇಕಾಗುತ್ತದೆ. ಅದರಂತೆಯೇ ಸೂರ್ಯ ಧನುರಾಶಿಗೆ ಪ್ರವೇಶ ಮಾಡಿ ಮಕರರಾಶಿಗೆ ಪ್ರವೇಶ ಮಾಡಲು ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಈ ಒಂದು ತಿಂಗಳನ್ನು ಧನು ರಾಶಿಯ 'ಧನುರ್ಮಾಸ' ಎಂದು ಕರೆಯುತ್ತಾರೆ. ಈ ಮಾಸದಲ್ಲಿ ವಿಶೇಷವಾಗಿ ಚಳಿ ಇರುತ್ತದೆ. ಚಳಿಯ ತೀವ್ರತೆ ಎಷ್ಟಿರುತ್ತದೆ ಎಂದರೆ ಚಳಿಯನ್ನು ತಾಳಲಾರದೆ, ರಾತ್ರಿ ವೇಳೆ ಮನುಷ್ಯ ತನ್ನ ದೇಹವನ್ನು ಬಿಲ್ಲಿನಂತೆ ಬಾಗಿಸಿ ಮಲಗುತ್ತಾನೆ. ಮುದುರಿಕೊಳ್ಳುತ್ತಾನೆ. ಆದ್ದರಿಂದಲೇ ಈ ಮಾಸಕ್ಕೆ ಧನುರ್ಮಾಸ ಎಂದು ಹೆಸರು.

ಇಂತಹ ಧನುರ್ಮಾಸದ ಅರುಣೋದಯ ಕಾಲದಲ್ಲಿ ಒಂದು ತಿಂಗಳು ಹುಗ್ಗಿಯನ್ನು ತಯಾರಿಸಿ, ಧನುರ್ ನಾರಾಯಣನಿಗೆ ಸವರ್ಪಿಸುವುದು ನಮ್ಮ ಸಂಪ್ರದಾಯ.

ಅತಿಶಯ ಸಂಪತ್ತು

ಧನುರ್ಮಾಸದಲ್ಲಿ ವಿಷ್ಣು ಪೂಜೆಯೊಡನೆ ಶ್ರೀಲಕ್ಷ್ಮಿಯನ್ನು ದ್ವಾದಶ ನಾಮದೊಂದಿಗೆ ಪ್ರಾರ್ಥಿಸಿದರೆ ಅತಿಶಯ ಸಂಪತ್ತು ಒಲಿಯುತ್ತದೆ. ಒಮ್ಮೆ ಇಂದ್ರ ದೇವರು ರಾಜ್ಯ ಭ್ರಷ್ಟರಾದಾಗ ಶಚೀದೇವಿ ಹುಗ್ಗಿಯ ನೈವೇದ್ಯ ಮಾಡಿ, ಮಹಾಲಕ್ಷ್ಮಿಯನ್ನು ದ್ವಾದಶನಾಮಗಳಿಂದ ಸ್ತುತಿಸಿದಳು. ಅದರ ಫಲವಾಗಿ ಇಂದ್ರ ದೇವರಿಗೆ ಪುನಃ ರಾಜ್ಯವು ದೊರೆಯಿತು ಎಂಬುದು ಪುರಾಣದ ಕತೆ.

ದೇವತೆಗಳಿಗೆ ದಕ್ಷಿಣಾಯನ ರಾತ್ರಿಯ ಕಾಲ. ಅದರಂತೆ ಉತ್ತರಾಯಣ ಹಗಲಿನ ಸಮಯ. ಆದರೆ ಈ ಧನುರ್ಮಾಸ ಹಗಲು-ರಾತ್ರಿ ಎರಡೂ ಸೇರಿದ ಸಮಯವೆಂದು ಹೇಳಲಾಗಿದ್ದು, ಬ್ರಾಹ್ಮಿ ಮುಹೂರ್ತದಲ್ಲಿ  ಎದ್ದು ಸ್ನಾನ ಮಾಡಿ ಭಗವಂತನನ್ನು ಪೂಜಿಸಿ ಹುಗ್ಗಿಯನ್ನು ಯಾರು ಸಮರ್ಪಿಸುತ್ತಾರೋ ಅವರ ಮನೋಭೀಷ್ಟಗಳು ಅಕ್ಷಯವಾಗಿ ನೆರವೇರುತ್ತದೆ. ನಕ್ಷತ್ರಗಳು ಕಾಣುವ ಸಮಯ ಉತ್ತಮ ಪೂಜಾಫಲ. ಅವು ಮರೆಯಾದರೆ ಮಧ್ಯಮ, ಮುಂಜಾನೆಯ ಹೊಂಬೆಳಕು ಮೂಡಿದರೆ ಅಧಮಕಾಲ. ಮಧ್ಯಾಹ್ನವಂತೂ ವ್ಯರ್ಥ. 

ಧನುರ್ಮಾಸದ ಪೂಜಾ ನೈವೇದ್ಯ ನಿಯಮವನ್ನು ತಿಂಗಳುದ್ದಕ್ಕೂ ಪ್ರತಿದಿನ ನಡೆಸಬೇಕೆಂದು ನಿಯಮವಿದ್ದರೂ, ಆಪದ್ಧರ್ಮಗಳು ಒಂದೇ ಒಂದು ದಿನವಾದರೂ ಧನುರ್ಮಾಸ ವ್ರತ ನಡೆಸಲೇ ಬೇಕು ಎಂದಿದೆ.

ಇದನ್ನೂ ಮಾಡಲಾರದವರು ಪುಷ್ಯಮಾಸದಲ್ಲಿ ಬರುವ ಮುಕ್ಕೋಟಿ ದ್ವಾದಶಿಯಂದು ಧನುರ್ಮಾಸದ ಕಾರ್ಯಗಳನ್ನು ಮಾಡುವುದುಂಟು. ತಿರುಪತಿ ತಿಮ್ಮಪ್ಪನಿಗೆ ಸಲ್ಲುವ ವೈಕುಂಠ ಏಕಾದಶಿ, ಮುಕ್ಕೋಟಿ ದ್ವಾದಶಿ ಪೂಜಾ ಕೈಂಕರ್ಯಗಳು ವೈಶಿಷ್ಟ್ಯಪೂರ್ಣವಾದುದು.

- ಗುರುರಾಜ ಪೋಶೆಟ್ಟಿಹಳ್ಳಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್