ಭಕ್ತಿ-ಜ್ಯೋತಿಷ್ಯ

ಸರ್ವ ಪಾವನ ತುಳಸಿ

ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ಅತ್ಯಂತ ಪೂಜನೀಯ ಹಾಗೂ ಗೌರವ ಸ್ಥಾನವಿದೆ. ಭಾರತದಲ್ಲಿ ಪ್ರತಿಯೊಂದು ಮನೆಯ...

'ಪ್ರಸೀದ ತುಲಸೀದೇವಿ ಪ್ರಸೀದ ಹರಿವಲ್ಲಭೇ ಕ್ಷೀರೋದಮಥನೋದ್ಭೂತೇ ತುಲಸಿ ತ್ವಾಂ ನಮಾಮ್ಯಹಮ್‌'
ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ಅತ್ಯಂತ ಪೂಜನೀಯ ಹಾಗೂ ಗೌರವ ಸ್ಥಾನವಿದೆ. ಭಾರತದಲ್ಲಿ ಪ್ರತಿಯೊಂದು ಮನೆಯ ಮುಂಭಾಗ ಅಥವಾ ಹಿಂಭಾಗದಲ್ಲಿ ತುಳಸಿಕಟ್ಟೆ ಸ್ಥಾಪಿಸಿರುತ್ತಾರೆ. ಎಲ್ಲಾ ಧಾರ್ಮಿಕ  ಆಚರಣೆಗೂ ತುಳಸಿಯನ್ನು ಬಳಸುತ್ತಾರೆ.

ಉತ್ಥಾನ ದ್ವಾದಶಿ
ಕಾರ್ತಿಕ ಮಾಸದ ಹಬ್ಬಗಳಲ್ಲಿ ಅತ್ಯಂತ ಪ್ರಸಿದ್ಧವಾದುದು ಉತ್ಥಾನ ದ್ವಾದಶಿ. ಉತ್ಥಾನ ಎಂದರೆ ಏಳುವುದು ಎಂದರ್ಥ. ಅಂದರೆ, ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲಕ್ಕೆದ್ದು, ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ಈ ದಿನವನ್ನು  ಕ್ಷೀರಾಭಿವ್ರತವೆಂದು ಹಲವು ಕಡೆ ಆಚರಿಸುವರು.

ತುಳಸಿಯ ಪೌರಾಣಿಕ ಹಿನ್ನೆಲೆ
ಹಿಂದೆ ಸಮುದ್ರ ಮಥನ ಮಾಡುವಾಗ ಬಂದಂತಹ ಅಮೃತ ಕಳಶವನ್ನು ಮಹಾವಿಷ್ಣು  ಪಡದುಕೊಳ್ಳುತ್ತಾನೆ. ಆ ಸಂದರ್ಭದಲ್ಲಿ ಆತನ ಕಣ್ಣಿನಿಂದ ಆನಂದಭಾಷ್ಪ ಉಕ್ಕಿ ಬರುತ್ತದೆ. ಇದರ ಒಂದು ಹನಿ ಕಳಶದಲ್ಲಿ ಬಿದ್ದಾಗ ಅದು ತುಳಸಿಗಿಡವಾಯಿತು. ಅಮೃತದಿಂದ ಜನಿಸಿದಂತಹ ತುಳಸಿಯನ್ನು ಯಾವ ವಿಧವಾಗಿ ಉಪಯೋಗಿಸಿದರೂ ಅದು ಅಮೃತಮಯವಾಗುತ್ತದೆ. ಇಷ್ಟು ಪವಿತ್ರವಾದ ತುಳಸಿ ಶ್ರೀಮನ್ನಾರಾಯಣನಿಗೆ ಲಕ್ಷ್ಮಿಯಷ್ಟೇ ಪ್ರಿಯಳು. ಆದುದರಿಂದಲೇ ಮೂರೂ ಲೋಕಗಳಲ್ಲಿ ತುಳಸಿಗೆ ಸಮಾನವಾದುದು ಯಾವುದೂ ಇಲ್ಲ ಎಂದು ತಿಳಿಯಲಾಗಿದೆ.  ತುಳಸಿ ಇಲ್ಲದೇ ಮಾಡಿದ ಪೂಜೆ ನಿಷ್ಫಲವಾಗುವುದು. ತುಳಸಿದಳಗಳು ದೊರೆಯದಿದ್ದರೆ, ತುಳಸೀ ಕಾಷ್ಠದಿಂದ ಪೂಜೆ ಮಾಡಬಹುದು ಅಥವಾ ಹಿಂದಿನ ದಿನ ಉಪಯೋಗಿಸಿದ ತುಳಸೀ ದಳಗಳನ್ನೇ ತೊಳೆದು ಪುನಃ ದೇವರಿಗೆ ಸಮರ್ಪಿಸಬಹುದು. ತುಳಸೀಕಾಷ್ಠಗಳೂ ದೊರೆಯದಿದ್ದರೆ, ಪೂಜಾಸಮಯದಲ್ಲಿ ತುಳಸೀನಾಮದ ಸಂಕೀರ್ತನೆ ಮಾಡಬೇಕು. 

ತುಳಸಿ ಮಹಿಮೆ
ತುಳಸಿ ಬಹುಪಯೋಗಿ ಸಸ್ಯ. ತುಳಸಿ ಮೃತ್ತಿಕೆ, ತೀರ್ಥ, ದಳ, ತೆನೆ ಎಲ್ಲವೂ ಪವಿತ್ರ. ಹಾಲಿನ ಸಮುದ್ರದಲ್ಲಿ ಹುಟ್ಟಿದ ತುಳಸಿಯನ್ನು, ಹಾಲಿನಿಂದಲೇ ಪೂಜಿಸಿದರೆ, ಬೇಗನೆ ಪ್ರಸನ್ನಳಾಗಿ ಸಂಪತ್ತು ಅನುಗ್ರಹಿಸುತ್ತಾಳೆಂಬ ವಾಡಿಕೆ ಬಹಳ ಹಿಂದಿನದು. 

ಶಿವನಿಗೆ ಬಿಲ್ವಪತ್ರೆ ಪ್ರಿಯವಾದಂತೆ, ವಿಷ್ಣುವಿಗೆ ತುಳಸಿ ಬಹುಪ್ರಿಯ.  ತುಳಸಿಯಲ್ಲಿ ಬಿಳಿಸುಳಸಿ, ಕಪ್ಪುತುಳಸಿ (ಕೃಷ್ಣತುಳಸಿ) ಮುಂತಾದ ಬಗೆಗಳಿವೆ.  ವೈದ್ಯಶಾಸ್ತ್ರದಲ್ಲಿ ತುಳಸಿಗೆ ಹೆಚ್ಚು ಪ್ರಾಧಾನ್ಯತೆಯಿದೆ.  ಸೂಕ್ಷ್ಮ ಜೀವಾಣುನಾಶಕ ಗುಣಗಳಿರುವ ತುಳಸಿ ಎಲೆ ವಿಷಮಶೀತ ಜ್ವರದಂತಹ ಕಾಯಿಲೆಗಳನ್ನು ನಿವಾರಿಸುವ ಶಕ್ತಿ ಹೊಂದಿದೆ.
ತುಳಸಿಯಿರುವೆಡೆ ಸೊಳ್ಳೆಗಳ ಕಾಟವಿರುವುದಿಲ್ಲ.  ಮಕ್ಕಳ ನೆಗಡಿ- ಕೆಮ್ಮು ಶೀತಕ್ಕೆ, ಚರ್ಮರೋಗಕ್ಕೆ ಇದು ರಾಮಬಾಣ.  ತುಳಸೀರಸದ ನಿಯಮಿತ ಸೇವನೆಯಿಂದ ನಿದ್ರಾಹೀನತೆಯನ್ನು ಹೊಡೆದೊಡಿಸಬಹುದು.  ಮಕ್ಕಳಿರುವ ಮನೆಗೆ ತುಳಸಿ ಅವಶ್ಯಕ ಮಾತ್ರವಲ್ಲ, ಅನಿವಾರ್ಯವೂ ಹೌದು.  ಅದಕ್ಕೆಂದೇ ಸ್ತ್ರೀಯರಿಗೆ ತುಳಸೀ ಪ್ರದಕ್ಷಿಣಾ, ಪುರುಷರಿಗೆ ತುಲಸೀ ಮಾಲಾಧಾರಣವೆಂದು ಹಿಂದಿನಿಂದಲೂ ಪ್ರತೀತಿಯಿದೆ.

ತುಳಸೀ ಕಲ್ಯಾಣ
ಉತ್ಥಾನ ದ್ವಾದಶಿಯಂದು ತುಳಸೀ ವೃಂದಾವನಕ್ಕೆ ಧೂಪ-ದೀಪ-ನೈವೇದ್ಯಗಳಿಂದ ಪೂಜಿಸುತ್ತಾರೆ.  ವಿಶೇಷವಾಗಿ ಶಂಖದಿಂದ ಹಾಲಿನ ಅಭಿಷೇಕ ಮಾಡಬೇಕು. ಅಂದು ತುಳಸಿಯನ್ನು ಅಗಸೆ ಹಾಗೂ ನೆಲ್ಲಿ ಟೊಂಗೆಯೊಂದಿಗೆ ಕಟ್ಟಿ ವೈಭವದಿಂದ ಪೂಜಿಸಿ, ಆರತಿ ಮಾಡಿ, ದಾನಾದಿಗಳನ್ನು ಮಾಡಬೇಕು.  ಅಗಸೆ, ನೆಲ್ಲಿ ಮತ್ತು ತುಳಸಿ ಇವು ಮೂರು ಬಹಳ ಪವಿತ್ರವಾದುವು. ವೃಂದಾದೇವಿಯ ಅನುಗ್ರಹಕ್ಕೆ ಪಾತ್ರರಾಗಲು ತ್ರಿಮೂರ್ತಿಗಳೂ ಅವರ ಪತ್ನಿಯರಾದ ಶಕ್ತಿದೇವಿಯರೂ ಮತ್ತು ಇತರೆ ದೇವತೆಗಳೂ ಉತ್ಥಾನ ದ್ವಾದಶಿಯಂದು ಒಟ್ಟಾಗಿ ಸೇರುತ್ತಾರೆಂದೂ, ಇಷ್ಟಾರ್ಥಗಳನ್ನು ಪೂರೈಸುತ್ತಾರೆಂದು, ಭಕ್ತಿಯಿಂದ ತುಳಸಿಗೆ ನಮಿಸಿ ಕೃತಾರ್ಥರಾಗುತ್ತಾರೆ.

- ಭಾಗ್ಯಾ ನಂಜುಂಡಸ್ವಾಮಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ