ಮಲೆ ಮಹದೇಶ್ವರ ಸ್ವಾಮಿ 
ಭಕ್ತಿ-ಭವಿಷ್ಯ

ಮಲೆ ಮಹದೇಶ್ವರನಿಗೆ ಉಘೇ ಉಘೇ ಎನ್ನಿರೋ!

ಮಹದೇಶ್ವರನ ಭಕ್ತರಾಗಿದ್ದ ಶ್ರೀ ಜಯಚಾಮರಾಜ ಒಡೆಯರು ಮತ್ತು ಶ್ರೀಕೃಷ್ಣರಾಜ ಒಡೆಯರು ತಾಳಬೆಟ್ಟದಿಂದ ಕಾಲ್ನಡಿಗೆಯಲ್ಲೇ ಬೆಟ್ಟವೇರಿ ಮಾದಯ್ಯನ ದರ್ಶನ ಮಾಡುತ್ತಿದ್ದರಂತೆ...

ಕರ್ನಾಟಕ ಪುಣ್ಯಕೇತ್ರಗಳ ತವರೂರು. ಪೂರ್ವ ಘಟ್ಟಗಳ ಉತ್ತುಂಗ ಶಿಖರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟ, ನಿಸರ್ಗದ ಮಡಿಲಲ್ಲಿ ನೆಲೆಗೊಂಡಿರುವ ಪ್ರಮುಖ ಪುಣ್ಯಕ್ಷೇತ್ರವಾಗಿದೆ.
ಕೊಳ್ಳೇಗಾಲಕ್ಕೆ 80 ಕಿಲೋ ಮೀಟರ್ ಹಾಗೂ ಮೈಸೂರಿನಿಂದ 150 ಕಿಲೋ ಮೀಟರ್ ದೂರದಲ್ಲಿರುವ ಬೆಟ್ಟಶ್ರೇಣಿಯೇ ಮಹದೇಶ್ವರ ಬೆಟ್ಟ. ಮಾದೇಶನ ಬೆಟ್ಟ, ಮಹದೇಶ್ವರ ಗಿರಿ, ಎಂಎಂಹಿಲ್ಸ್ ಎಂದು ಖ್ಯಾತವಾದ ಈ ಬೆಟ್ಟ ಕೊಳ್ಳೇಗಾಲದ ಪೂರ್ವಕ್ಕಿರುವ ಪವಿತ್ರ ಯಾತ್ರಾಸ್ಥಳ.
ಈ ವಿಶಾಲ ಬೆಟ್ಟದ ಮೇಲೆ ಮಹದೇಶ್ವರ ಸ್ವಾಮಿ ದೇವಾಲಯವಿದೆ. ಬೆಟ್ಟ ಹತ್ತಲು ಸರ್ಪನದಾರಿ. ಬಸವನದಾರಿ ಎಂಬ ಎರಡು ಮಾರ್ಗಗಳಿವೆ. ಸ್ಥಳ ಪುರಾಣದ ಪ್ರಕಾರ ಈ ಬೆಟ್ಟಕ್ಕೆ ಸೇರಿದಂತೆ ಆನೆಮಲೆ, ಜೇನುಮಲೆ, ಕಾನುಮಲೆ, ಪಷ್ಷೆಮಲೆ, ಪವಳಮಲೆ, ಪೊನ್ನಾಚಿಮಲೆ , ಕೊಂಗುಮಲೆ ಮೊದಲಾಗಿ 77 ಮಲೆಗಳಿವೆ. ಕೊಳ್ಳೇಗಾಲದಿಂದ ಮಧುವನಹಳ್ಳಿ, ಸಿಂಗಾನಲ್ಲೂರು, ಹನೂರು ಮಾರ್ಗವಾಗಿ ಕೌದಳ್ಳಿ ತಲುಪಿದರೆ, ಅಲ್ಲಿಂದ ಬೆಟ್ಟಕ್ಕೆ 16ಕಿ.ಮೀ ಕಾಡುದಾರಿ. ಮುಂದೆ ತಾಳಬೆಟ್ಟ ಎಂಬ ಬೆಟ್ಟದ ತಪ್ಪಲು ಸಿಗುತ್ತದೆ. ಮಹದೇಶ್ವರನ ಭಕ್ತರಾಗಿದ್ದ ಶ್ರೀ ಜಯಚಾಮರಾಜ ಒಡೆಯರು ಮತ್ತು ಶ್ರೀಕೃಷ್ಣರಾಜ ಒಡೆಯರು ತಾಳಬೆಟ್ಟದಿಂದ ಕಾಲ್ನಡಿಗೆಯಲ್ಲೇ ಬೆಟ್ಟವೇರಿ ಮಾದಯ್ಯನ ದರ್ಶನ ಮಾಡುತ್ತಿದ್ದರಂತೆ.
ಈ ಪೈಕಿ ಮಹದೇಶ್ವರ ಬೆಟ್ಟದಲ್ಲಿ ಇರುವ ಶಿವ ದೇವಾಲಯವೇ ಪ್ರಧಾನವಾದ್ದು. ಗಿರಿಜನರ, ಸೋಲಿಗರ ಹಾಗೂ ಸುತ್ತಮುತ್ತಲ ಪ್ರದೇಶದ ಹಲವು ವಂಶಗಳ ಕುಲದೈವವಾಗಿ ಪೂಜಿಸಲ್ಪಡುವ ಮಹದೇಶ್ವರರು 15ನೇ ಶತಮಾನದಲ್ಲಿ ಜೀವಿಸಿದ್ದರೆಂದು ಇತಿಹಾಸದಿಂದ ತಿಳಿದುಬರುತ್ತದೆ.  ಲೋಕಕಲ್ಯಾಣಾರ್ಥ  ದೇಶ ಸಂಚಾರ ಮಾಡಿ, ಹಲವರ ಸಂಕಷ್ಟ ಪರಿಹರಿಸಿದ ಪವಾಡಪುರುಷ ಮಹದೇಶ್ವರರು ಹರದನಹಳ್ಳಿ ಮಠದ ಮೂರನೇ ಮಠಾಧೀಶರಾಗಿದ್ದರೆಂದೂ ತಿಳಿದುಬರುತ್ತದೆ.
ನಮ್ಮದೇವಾಲಯಗಳುಸುಮಾರು 600 ವರ್ಷಗಳ ಹಿಂದೆ ಇಲ್ಲಿಗೆ ಬಂದ ಅವರು, ಬೆಟ್ಟದಲ್ಲಿ ನೆಲೆಸಿ ದೀರ್ಘಕಾಲ ತಪವನ್ನಾಚರಿಸಿದರೆಂದೂ, ತಮ್ಮ ದಿವ್ಯ ಹಾಗೂ ತಪಃಶಕ್ತಿಯಿಂದ ಜನರ ಕಷ್ಟವನ್ನು ನಿವಾರಿಸುತ್ತಿದ್ದರೆಂದೂ ಹೇಳಲಾಗುತ್ತದೆ. ಇಂದಿಗೂ ಇಲ್ಲಿ ಮಹದೇಶ್ವರರು ಲಿಂಗರೂಪದಲ್ಲಿ ನೆಲೆಸಿದ್ದಾರೆಂಬುದು ಜನರ ನಂಬಿಕೆ.  ಬೆಟ್ಟಗಳಿಂದಲೇ ಸುತ್ತುವರಿದ ವಿಶಾಲ ಪ್ರದೇಶದಲ್ಲಿರುವ ದೇವಾಲಯ 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹಬ್ಬಿದೆ.
ನಮ್ಮದೇವಾಲಯಗಳು ಹುಲಿಯ ಬೆನ್ನೇರಿ ಸವಾರಿ ಮಾಡುತ್ತಿದ್ದ ಮಹದೇಶ್ವರರು ಒಬ್ಬ ಮಹಿಮಾಪುರುಷ, ಪವಾಡ ಪುರುಷ ಎಂಬುದು ಕಾವ್ಯಗಳಲ್ಲಿ ವೇದ್ಯವಾಗಿದೆ. ದಕ್ಷಿಣ ಕರ್ನಾಟಕದ ಬೇವಿನ ಕೊಲ್ಲಿಯಲ್ಲಿ ಮಾದೇಶ್ವರರು ಜನ್ಮತಳೆದರೆಂಬ ಪ್ರತೀತಿ ಇದೆ. ಇವರಲ್ಲಿ ಅಸಾಮಾನ್ಯವಾದ ಅಲೌಕಿಕ ಶಕ್ತಿಯಿತ್ತು. ತಮ್ಮ ಶಕ್ತಿಯಿಂದ ಅವರು ಸಮಾಜದ ಉದ್ಧಾರಕ್ಕೆ ಶ್ರಮಿಸಿದರು. ಈಗಲೂ ತಮ್ಮ ಶಕ್ತಿಯಿಂದ ಭಕ್ತರನ್ನು ಹರಸುತ್ತಿದ್ದಾರೆ ಎಂಬುದು ನಂಬಿಕೆ. ಹೈದರಲಿಯ ಕಾಲದ 1761ರ ಒಂದು ಶಾಸನದಲ್ಲಿ ಮಾದೇಶ್ವರರ ಬಗ್ಗೆ  ವಿವರಗಳು ತಿಳಿದುಬರುತ್ತವೆ.
ನಡುಮಲೆಯ ಸಮೀಪದಲ್ಲಿ ಪ್ರಸಿದ್ದಿಯಾಗಿರುವ ಮತ್ತೊಂದು ಬೆಟ್ಟ, ನಾಗಮಲೆ. ಈ ಬೆಟ್ಟದ ತುದಿಯಲ್ಲಿ, ಶಿವಲಿಂಗಕ್ಕೆ ಅಂಟಿಕೊಂಡಿರುವ ನಾಗರಹಾವಿನ ರೂಪದಲ್ಲಿರುವ ಬಂಡೆಯನ್ನು ನೋಡಬಹುದು. ಇದರಿಂದಾಗಿಯೇ ಈ ಬೆಟ್ಟಕ್ಕೆ ನಾಗಮಲೆ ಎಂದು ಹೆಸರು. ನಿಜಕ್ಕೂ ಪ್ರಕೃತಿ ವಿಸ್ಮಯಕ್ಕೆ ಬೆರಗಾಗದೆ ಇರುವರು ಯಾರು ಇಲ್ಲ. ಇಲ್ಲಿಯೂ ಒಂದು ಪುಟ್ಟ ದೇವಸ್ಥಾನವಿದೆ. ಭಕ್ತಾದಿಗಳು ಮಾದೇಶ್ವರನ ದರ್ಶನ ಪಡೆದು, ಬೆಟ್ಟವನ್ನು ಹತ್ತುವ ಶಕ್ತರು ಇಲ್ಲಿಯೂ ಬರುತ್ತಾರೆ. ಈ ಬೆಟ್ಟವು ಮಾದೇಶ್ವರ ಬೆಟ್ಟದಿಂದ ೧೫ ಮೈಲಿಗಳಷ್ಟು ದೂರವಿದೆ. ಸುಮಾರು ೯ ಮೈಲಿಗಳವರೆಗೆ, ಇಂಡಿಗನತ್ತ ಎಂಬ ಊರಿನವರೆಗೆ ಜೀಪ್ ದಾರಿಯಿದೆ. ನಂತರ ಕಾಲುದಾರಿಯಲ್ಲಿಯೇ ಚಿಕ್ಕ ಚಿಕ್ಕ ಬೆಟ್ಟಗಳನ್ನು ಹತ್ತಿ, ಇಳಿದು ೬ ಮೈಲಿಗಳಷ್ಟು ಕ್ರಮಿಸಿದರೆ ನಾಗಮಲೆ ಸಿಗುತ್ತದೆ. ದಾರಿಯಲ್ಲಿ ಬೆಟ್ಟ-ಗುಡ್ಡಗಳು, ದಟ್ಟಕಾಡು, ಕೆರೆ-ಹಳ್ಳಗಳ ನೋಟ ರಮಣೀಯ. ಒಮ್ಮೊಮ್ಮೆ ದಾರಿಯಲ್ಲಿ ಆನೆಗಳೂ ಸಿಗುವುದುಂಟು. ಅಲ್ಲಲ್ಲಿ ಸೋಲಿಗರು, ಕಾಡುಕುರುಬರ ಚಿಕ್ಕ ಗುಡಿಸಲುಗಳು ಮತ್ತು ಅವರು ವ್ಯವಸಾಯ ಮಾಡುವ ದೃಶ್ಯಗಳನ್ನು ನೋಡಬಹುದು.
- ವಿಶ್ವನಾಥ್. ಎಸ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT