ಶಿವ-ಪಾರ್ವತಿ 
ಭಕ್ತಿ-ಭವಿಷ್ಯ

ಭೀಮನ ಅಮಾವಾಸ್ಯೆಯ ಮಹತ್ವ

ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು...

ಭಾರತೀಯ ಸಂಪ್ರದಾಯದಂತೆ ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

ಭೀಮನ ಅಮಾವಾಸ್ಯೆಯನ್ನು ಮದುವೆಯಾದ ಹೆಂಗಸರು ಮಾತ್ರವಲ್ಲ, ಮದುವೆಯಾಗದ ಹೆಣ್ಣುಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣುಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ದೇವರನ್ನು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.

ಪೂಜಾ ವಿಧಾನ
ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು. ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಭ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.

ವಿವಿಧ ರೀತಿ ಆಚರಣೆ:
ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ಕೊಡೆ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.

ಈ ಹಬ್ಬದ ಇನ್ನೊಂದು ವಿಶೇಷತೆ ಭಂಡಾರ:
ಭಂಡಾರವನ್ನು ಕರಿಗಡುಬು ಮೈದಾ ಹಿಟ್ಟಿನಿಂದ ಮಾಡಿಕೊಳ್ಳಬಹುದು. ಇದನ್ನು ಮಾಡುವಾಗ ಇದರೊಳಗೆ ದುಡ್ಡು/ನಾಣ್ಯವನ್ನು ಇಡಬೇಕು. ಇದನ್ನು ಹೊಸ್ತಿನ ಮೇಲೆ ಇಟ್ಟು ಪೂಜೆ ಮಾಡಬೇಕು. ಅಣ್ಣ/ತಮ್ಮ ಇದನ್ನು ಒಡೆಯುತ್ತಾರೆ. ಅವರಿಗೆ ಆರಿತ ಮಾಡಿ, ಒಳಗೆ ಇರುವ ದುಡ್ಡಿನ ಜತೆಗೆ ಉಡುಗೊರೆ ಕೊಡಬೇಕು.

ಪೌರಾಣಿಕ ಹಿನ್ನೆಲೆ
ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ

ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಭಾರತದ ಜಿಡಿಪಿ ಪ್ರಬಲ ಜಿಗಿತ: ಮೊದಲ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಬೆಳವಣಿಗೆ

ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಬಿದ್ದ PV Sindhu: ಇಂಡೋನೇಷ್ಯಾದ ಶಟ್ಲರ್ ಕುಸುಮಾ ವಿರುದ್ಧ ಸೋಲು!

SCROLL FOR NEXT