ಹನುಮ 
ಭಕ್ತಿ-ಭವಿಷ್ಯ

ಶ್ರೀರಾಮನ ಪರಮ ಭಕ್ತ ಹನುಮ ಜಯಂತಿ ಆಚರಣೆಯ ವಿಶೇಷತೆ

ಪಿತೃ ವಾಕ್ಯ ಪರಿಪಾಲಕ, ಏಕ ಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಪರಮ ಭಕ್ತನಾಗಿರುವ ಹನುಮಂತನು ಅವತಾರ ತಾಳಿದ ದಿನ ಹನುಮ ಜಯಂತಿ...

ಪಿತೃ ವಾಕ್ಯ ಪರಿಪಾಲಕ, ಏಕ ಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಪರಮ ಭಕ್ತನಾಗಿರುವ ಹನುಮಂತನು ಅವತಾರ ತಾಳಿದ ದಿನವನ್ನು ಹನುಮ ಜಯಂತಿ ಎಂದು ಆಚರಿಸಲಾಗುತ್ತದೆ. 
ಚೈತ್ರ ಮಾಸದಲ್ಲಿ ಬರುವ ಈ ಹನುಮ ಜಯಂತಿಯನ್ನು ಭಾರತದಲ್ಲಿ ವಿಶಿಷ್ಟ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸುತ್ತಾರೆ. ಹನುಮನು ಹಿಂದೂ ಧರ್ಮಗ್ರಂಥಗಳಲ್ಲಿ ಪೂಜಿಸುವ ದೈವವಾಗಿದ್ದು, ಭಾರತದ ಮಹಾಕಾವ್ಯ ಎಂದೇ ಹೇಳಲಾಗುವ ರಾಮಾಯಣದಲ್ಲಿ ಪ್ರಮುಖ ಪಾತ್ರಗಳಲ್ಲೊಬ್ಬನಾಗಿದ್ದಾನೆ. ವಾಯುಪುತ್ರ, ಕಪಿವೀರ, ರಾಮಭಕ್ತ, ಮಾರುತಿ, ಸುಂದರ, ಅಂಜನಾತನಯ, ಆಂಜನೇಯ, ವಾನರ ಶ್ರೇಷ್ಠ, ಕೇಸರಿ ನಂದನ, ಹನುಮಂತ ಎಂಬ ನಾನಾ ಹೆಸರಿನಲ್ಲಿ ಕರೆಯಲ್ಪಡುವ ಈ ಹನುಮನ ಉಲ್ಲೇಖ ವೈದಿಕ ಸಾಹಿತ್ಯದಲ್ಲೇ ಲಭಿಸುತ್ತದೆ. ಪುರಾಣಗಳಲ್ಲಿ ಅವನು ಕೇಸರಿಯೆಂಬ ವಾನರ ರಾಜನ ಮಡದಿ ಅಂಜನಾದೇಯೆಂಬ ಅಪ್ಸರೆಯಲ್ಲಿ ವಾಯುನ ಅಂಶದಿಂದ ಜನ್ಮ ತಾಳಿದನೆಂದು ಹೇಳಲಾಗಿದೆ.
ಅಂಜನಾ ದೇವಿಯು ಪುಂಜಿಕಸ್ಥಲೆಯೆಂಬ ಅಪ್ಸರೆಯಾಗಿದ್ದಳು. ಹನುಮಂತನ ಕಲ್ಪನೆಯಲ್ಲಿ ಹಾಸುಹೊಕ್ಕಾಗಿರುವ ವಿವರಗಳು ವೇದವಾಙ್ಮಯದಲ್ಲಿ ಹಲವಾರಿವೆ. ಈ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಹನುಮಂತನ ಸ್ವಾರಸ್ಯ ಇಮ್ಮಡಿಸುತ್ತದೆ. ಮಗುವಾಗಿದ್ದಾಗ ಸೂರ್ಯನನ್ನು ಹಿಡಿದು ಬಾಯೊಳಗೆ ಅಡಗಿಸಿಕೊಂಡನೆಂದು ಕತ್ತಲೆ ಉಂಟಾಯಿತು. ಇಂದ್ರನಿಗೆ ರೋಷ ಬಂದು ಅವನ ವಜ್ರಾಯುಧದ ಪ್ರಹಾರದಿಂದ ಹನು (ದವಡೆ) ದೊಡ್ಡದಾಯಿತು. ಹೀಗಾಗಿ ಅವನಿಗೆ ಹನುಮಂತ ಎಂಬ ಹೆಸರು ಬಂತು. ಆಚಾರ್ಯ ಮಧ್ವರ ಒಕ್ಕಣೆಯಂತೆ ಹನುಮನೆಂದರೆ ಜ್ಞಾನ ಅಂದರೆ ಬುದ್ಧಿಮತಾಂ ವರಿಷ್ಠ, ಪೂರ್ಣಪ್ರಜ್ಞ.
ಹನುಮ ದೇವರ ಸ್ಮರಣೆ ಎಲ್ಲಿರಲ್ಲೂ ಒಂದು ವಿಶೇಷ ಶಕ್ತಿಯನ್ನು ತುಂಬುತ್ತದೆ. ರಾಮದೂತನನ್ನು ನೆನೆಯುವ ದಿನವೇ ಹನುಮ ಜಯಂತಿಯಾಗಿದ್ದು, ತ್ರೇತಾಯುಗದಲ್ಲಿ ರಾಮಭಕ್ತನಾಗಿ ಅವತಾರ ಮಾಡಿದ ಹನುಮನಿಗೆ ಅನೇಕ ವಿಧವಾದ ಶಕ್ತಿಯಿರುವುದನ್ನು ರಾಮಾಯಣದಲ್ಲಿ ತಿಳಿದುಕೊಳ್ಳಬಹುದು. ಭಾರತೀಯ ಶಾಸ್ತ್ರಗಳಲ್ಲೂ ಹನಮಂತನ ಸ್ಮರಣೆಯಿಂದಾಗುವ ಲಾಭಗಳ ಬಗ್ಗೆ ಸಾಕಷ್ಟು ಉಲ್ಲೇಖಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT