ಕೆಡ್ಡಸ ಆಚರಣೆಯ ಸಂಗ್ರಹ ಚಿತ್ರಗಳು 
ಭಕ್ತಿ-ಭವಿಷ್ಯ

ಭೂಮಿತಾಯಿ ರಜಸ್ವಲೆಯಾಗುವ ಹಬ್ಬ ತುಳುನಾಡ ಸಂಸ್ಕೃತಿ ಕೆಡ್ಡಸ

ತುಳು ನಾಡಿನ ಜನರು ಮೂಲತಃ ದೈವ ಮತ್ತು ಪ್ರಕೃತಿ ಆರಾಧಕರು, ಇಲ್ಲಿನ ಮಂದಿ ಕೃಷಿಯನ್ನು ಜೀವನಕ್ಕೆ ಅವಲಂಬಿಸಿರುವವರು. ಕೃಷಿಗೂ ಪ್ರಕೃತಿ ಮಾತೆಗೂ ಬಿಡಿಸಲಾರದ ನಂಟು. ಮೂಲತಃ ಕೃಷಿಕರಾಗಿರುವ ತುಳುಮಂದಿಯ ಹಬ್ಬಗಳು ಕೃಷಿ ಆಧಾರಿತ ಹಿನ್ನೆಲೆಯಲ್ಲಿ ಆಚರಿಸಲ್ಪತ್ತದೆ.

ತುಳುನಾಡಿನ ಜನರು ಮೂಲತಃ ದೈವ ಮತ್ತು ಪ್ರಕೃತಿ ಆರಾಧಕರು, ಇಲ್ಲಿನ ಮಂದಿ ಕೃಷಿಯನ್ನು ಜೀವನಕ್ಕೆ ಅವಲಂಬಿಸಿರುವವರು. ಕೃಷಿಗೂ ಪ್ರಕೃತಿ ಮಾತೆಗೂ ಬಿಡಿಸಲಾರದ ನಂಟು. ಮೂಲತಃ ಕೃಷಿಕರಾಗಿರುವ ತುಳುಮಂದಿಯ ಹಬ್ಬಗಳು ಕೃಷಿ ಆಧಾರಿತ ಹಿನ್ನೆಲೆಯಲ್ಲಿ ಆಚರಿಸಲ್ಪತ್ತದೆ.

ಕೆಡ್ಡಸ ತುಳುನಾಡಿನ ಪ್ರಮುಖ ಆಚರಣೆಗಳಲ್ಲಿ ಒಂದು. ಕೆಡ್ಡಸ ಹಬ್ಬವು ತುಳುವರ ಪೊನ್ನಿ ಅಥವಾ ಪುಯಿಂತೆಲ್ (ಫೆಬ್ರವರಿ ತಿಂಗಳ ಹೆಸರು ತುಳುವಿನಲ್ಲಿ ) ತಿಂಗಳಿನ 27 ರಿಂದ ಕುಂಭ ಸಂಕ್ರಮಣದವರೆಗೆ ಆಚರಣೆ ಇರುತ್ತದೆ. ಸಾಮಾನ್ಯವಾಗಿ ಮೂರುದಿನ ಕೆಡ್ಡಸ ಆಚರಿಸಲ್ಪಡುತ್ತದೆ. ಇದು ಶುರುಕೆಡ್ಡಸ, ನಡುಕೆಡ್ಡಸ ಮತ್ತು ಕಡೆಕೆಡ್ಡಸವೆಂದು ಆಚರಣೆಗೊಳ್ಳುತ್ತದೆ. ಇಂದು ಭಾನುವಾರ ಕಡೆ ಕೆಡ್ಡಸವಾಗಿದೆ. 

ಭಾರತೀಯರು ಭೂಮಿಯನ್ನು ಹೆಣ್ಣೆಂದು ಪರಿಗಣಿಸಿ ಭೂತಾಯಿ ಎಂದು ಪೂಜಿಸಿಕೊಂಡು ಬರುವುದು ಎಲ್ಲಾ ಕಡೆಯೂ ಸಂಸ್ಕೃತಿಯಲ್ಲಿ ಹಾಸುಹೊಕ್ಕಿದೆ. ಭೂಮಿತಾಯಿಯು ವರ್ಷಕ್ಕೆ ಮೂರುದಿನ ರಜಸ್ವಲೆಯಾಗುತ್ತಾಳೆ ಅಂದರೆ ಋತುಮತಿಯಾಗುತ್ತಾಳೆ ಎಂಬ ನಂಬಿಕೆ ತುಳುನಾಡು ಮಂದಿಯದ್ದು. 

ಈ ಹಿನ್ನೆಲೆಯಲ್ಲಿ ಕೆಡ್ಡಸವನ್ನು ಭೂಮಿತಾಯಿ ಸ್ನಾನ ಮಾಡುವ ಹಬ್ಬವೆಂದು ಕರೆಯುತ್ತಾರೆ. ಋತುಮತಿ ಅಥವಾ ಪುಷ್ಪವತಿಯಾದ ಹೆಣ್ಣು ಹೆಂಗಸಾದಳು ಎಂದು ಅರ್ಥ. ಈ ಮೂಲಕ ಭೂಮಿದೇವಿಯು ಫಲವತಿಯಾಗುವ ಅರ್ಹತೆಯನ್ನು ಪಡೆಯುತ್ತಾಳೆ. ಆದ್ದರಿಂದ ಕೆಡ್ಡಸ ಹಬ್ಬವು ಪ್ರಕೃತಿಯಲ್ಲಿ ಫಲವಂತಿಕೆಯ ಸಂಕೇತವಾಗಿ ಆಚರಣೆಗೆ ಒಳಪಡುವ ತುಳುವರ ಪ್ರಮುಖ ಹಬ್ಬವಾಗಿದೆ.

ಕೆಡ್ಡಸದ ಮೂರುದಿನ ಭೂಮಿದೇವಿ ರಜಸ್ವಲೆಯಾದ ಕಾರಣ ಆಕೆ ಸೂಕ್ಷ್ಮವಾಗಿರುತ್ತಾಳೆ. ಆದ್ದರಿಂದ ಈ ದಿನಗಳಲ್ಲಿ ನೆಲ ಅಗೆಯುವುದು, ಉಳುವುದು, ಮರ ಕಡಿಯುವುದು ನಿಷಿದ್ಧವಾಗಿದೆ. ಈ ಸಂದರ್ಭ ಕೃಷಿಕಾರ್ಯದಲ್ಲಿ ತೊಡಗಿದರೆ ಭೂಮಿದೇವಿಯು ನೋವನ್ನನುಭವಿಸಿ ಬಂಜೆಯಾಗುತ್ತಾಳೆ ಎಂದು  ನಂಬಿರುವ ತುಳುವರು ಕೃಷಿಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸುತ್ತಾರೆ.

ತುಳುನಾಡಿನ ಜನರು ಕೆಡ್ಡಸವನ್ನು 3 ದಿನ ಆಚರಿಸುತ್ತಾರೆ. ಮೂರೂ ದಿನವೂ ಅದರದ್ದೇ ಆದ ಸಂಪ್ರದಾಯ,ಆಚರಣೆ ವಿಧಾನಗಳಿರುತ್ತವೆ. ಅವುಗಳನ್ನು ಹೀಗೆ ಕಾಣಬಹುದು. 

 ಶುರುಕೆಡ್ಡಸ : ಮೊದಲ ದಿನ ಸ್ತ್ರೀಯರು ಅಂಗಳದ ಮುಂದೆ ನೆಲವನ್ನು ಸಾರಿಸಿ, ಗೋಮಯದಿಂದ ಶುದ್ಧೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸುತ್ತಾರೆ. ಬಿಳಿಯ ಮಡಿಬಟ್ಟೆ, ಗೆಜ್ಜಕತ್ತಿ, ತೆಂಗಿನ ಸೋಗೆಯ ಹಸಿಕಡ್ಡಿ ಇಟ್ಟು ಭೂಮಿದೇವಿಯ ಸಾನಿಧ್ಯ ರಚಿಸಿ ಪೂಜಿಸುತ್ತಾರೆ.

ಕೆಡ್ಡಸದ ಪ್ರಾರಂಭದ ದಿನ ಬೆಳಗ್ಗೆ ನವಧಾನ್ಯಗಳನ್ನು ಹುರಿದು ಪುಡಿಮಾಡಿ ಬೆಲ್ಲ, ಅರಳು, ತೆಂಗಿನ ಚೂರುಗಳನ್ನು ಬೆರಸಿ ಭೂಮಿದೇವಿಯ ಸಾನಿಧ್ಯದೆದರು ತುದಿಬಾಳೆಯಲ್ಲಿ ಬಡಿಸಿ ನಮಿಸುತ್ತಾರೆ. ಇವು ಬಯಕೆಯ ಸಂಕೇತ. ನಂತರ ಇದನ್ನು ಮನೆಮಂದಿ ಹಂಚಿ ತಿನ್ನುತ್ತಾರೆ. ಇದನ್ನು ಕುಡುಅರಿ ಅಥವಾ ನನ್ನೆರಿ ಎಂದು ತುಳುನಾಡು ಮಂದಿ ಕರೆಯುತ್ತಾರೆ.

ನಡುಕೆಡ್ಡಸ :ಅಂದು ಮೀನು-ಮಾಂಸ ತಿನ್ನುವ ಜಾತಿಯ ಗಂಡಸರು ಬೇಟೆಯಾಡಿ ಲಭಿಸಿದ ಮಾಂಸದ ಅಡುಗೆಯನ್ನು ಮನೆಮಂದಿ ಸಂಭ್ರಮದಿಂದ ಸವಿಯುತ್ತಾರೆ. ಈ ದಿನ ಪುಂಡದ ಹಕ್ಕಿಯ ಬೇಟೆ ವಿಶೇಷ. ಕೆಡ್ಡಸದ ಸಮಯದಲ್ಲಿ ಪುಂಡದ ಹಕ್ಕಿಗೆ ಜ್ವರ ಬರುತ್ತದೆ ಎಂಬ ಪ್ರತೀತಿಯಿದೆ. ಜ್ವರದಿಂದ ಬಳಲುವ ಈ ಹಕ್ಕಿ ಕೆರೆಯ ಬದಿಯಲ್ಲಿ ಪೊದೆಗಳ ಬದಿಯಲ್ಲಿ ಸುಲಭವಾಗಿ ಸಿಗುತ್ತದೆಯಂತೆ. 

ಕಡೆಕೆಡ್ಡಸ :ಮೂರನೆಯ ದಿನ ಮುಂಜಾನೆ ಮುತ್ತೈದೆಯರು ಸ್ನಾನ ಮಾಡಿ ಏಳು ಲೋಳೆಸರದ ಎಲೆಗಳನ್ನು  ಪಶ್ಚಿಮಕ್ಕೆ ತುದಿ ಬರುವಂತೆ ಸಾಲಾಗಿ ಇರಿಸಿ ದೀಪ, ಊದುಬತ್ತಿ ಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಪುಡಿ, ಅರಸಿನ ಕುಂಕುಮ, ಪಚ್ಚೆಹೆಸರು ಪುಡಿ, ವೀಳ್ಯದೆಲೆ ಇತ್ಯಾದಿಗಳನ್ನು ಭೂಮಿದೇವಿಯ ಸ್ನಾನಕ್ಕೆ ಇಡುತ್ತಾರೆ. ನಂತರ ಭೂಮಿದೇವಿಯ ಅಲಂಕಾರಕ್ಕಾಗಿ ಕನ್ನಡಿ, ಬಾಚಣಿಗೆ, ಕರಿಮಣಿಗಳನ್ನು ಇಡುತ್ತಾರೆ. ಈ ಪ್ರಕಾರ ರಜಸ್ವಲೆಯಾದ ಭೂಮಿದೇವಿಯು ಮಿಂದು ಶುದ್ಧಳಾಗಿ ಫಲವತಿಯಾಗುತ್ತಾಳೆ ಎಂದು ತುಳುವರ ನಂಬಿಕೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು ; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

SCROLL FOR NEXT