ಸಂಗ್ರಹ ಚಿತ್ರ 
ಭಕ್ತಿ-ಜ್ಯೋತಿಷ್ಯ

'ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್': ನಾಡಿಗೆಲ್ಲಾ ದೊಡ್ಡ ಹಬ್ಬ ನಾಗರ ಪಂಚಮಿ: ನಾಗದೇವನ ಈ ಸ್ತೋತ್ರ ಪಠಿಸಿದರೆ ಇಷ್ಟಾರ್ಥ ಕಾರ್ಯಸಿದ್ಧಿ!

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ.

ಹಿಂದೂ ಪುರಾಣದಲ್ಲಿ ನಾಗ ಪಂಚಮಿಗೆ ವಿಶೇಷ ಸ್ಥಾನವಿದೆ. ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ.

ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ತೆರಳಿ ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ.ನಾಗರ ಪಂಚಮಿಯು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಈ ದಿನ ನಾಗದೇವನಿಗೆ (ಸರ್ಪ) ಪೂಜೆ ಸಲ್ಲಿಸಿ, ಕುಟುಂಬದ ರಕ್ಷಣೆ, ಆರೋಗ್ಯ ಹಾಗೂ ಸಮೃದ್ಧಿಯನ್ನು ಕೋರಲಾಗುತ್ತದೆ. ಪ್ರಕೃತಿ ಮತ್ತು ಜೀವಸಂಕುಲದೊಂದಿಗೆ ಸಾಮರಸ್ಯ ಮೂಡಿಸಲು ಹಾಗೂ ಸರ್ಪ ದೋಷ ನಿವಾರಣೆಗಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ. ನಾಗ ಪಂಚಮಿ ಹಬ್ಬಗಳ ಸಾಲಿಗೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂತರಂತೆ ಆರಂಭವಾಗುತ್ತದೆ. ನಾಗರ ಪಂಚಮಿಯನ್ನು ಭಾರತದ ಹಲವಾರು ಪ್ರಾಂತ್ಯಗಳಲ್ಲಿ ಆಚರಿಸಲಾಗುತ್ತದೆ.

ನಾಗ ಪಂಚಮಿಯ ಕಥೆ

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು ಎಂಬ ಪ್ರತೀತಿ ಇದೆ.

ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿತ್ತು

ನಾಗದೇವನನ್ನು ಪೂಜಿಸುವುದರಿಂದ ಜಾತಕದಲ್ಲಿರುವ ಸರ್ಪ ದೋಷಗಳು ಮತ್ತು ಭಯ ದೂರವಾಗುತ್ತದೆ. ಕುಟುಂಬದ ಸದಸ್ಯರ ಆರೋಗ್ಯ ಮತ್ತು ಒಳಿತಿಗಾಗಿ ಮಹಿಳೆಯರು ಈ ದಿನ ವ್ರತ ಆಚರಿಸುತ್ತಾರೆ. ಹಾವುಗಳು ರೈತನ ಮಿತ್ರ ಹಾಗೂ ಪರಿಸರ ಸಮತೋಲನ ಕಾಯುವ ಜೀವಿಯಾಗಿರುವುದರಿಂದ, ಪ್ರಕೃತಿಯನ್ನು ಗೌರವಿಸುವ ಸಂದೇಶವನ್ನು ಈ ಹಬ್ಬ ಸಾರುತ್ತದೆ.

ನಾಗರಪಂಚಮಿ ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬ. ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ.

ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್|

ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ,

ಏತಾನಿ ನವ ನಾಮಾನಿ ನಾಗಾನಾಂ ಚ ಮಹಾತ್ಮನಾಮ್ |

ಸಾಯಂ ಕಾಳೇ ಪಠೇನ್ತ್ಯೆತ್ಯಂ ಪ್ರಾತ್ಕಾಲೇ ವಿಶೇಷತಃ ॥

ತಸ್ಯ ವಿಷಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್ ಈ ಸ್ತೋತ್ರ ಜಪಿಸುವುದರಿಂದ ಇಷ್ಟಾರ್ಥ ಸಿದ್ದಿಯಾಗಲಿದೆ ಎಂಬ ನಂಬಿಕೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!