ಮಂತ್ರಾಲಯ ರಾಘವೇಂದ್ರ ಸ್ವಾಮಿ 
ಭಕ್ತಿ-ಜ್ಯೋತಿಷ್ಯ

ಇಂದಿನಿಂದ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

ಇಂದು ಸಂಜೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಗೋ, ಗಜ, ಅಶ್ವ, ಧಾನ್ಯ, ಲಕ್ಷ್ಮಿ ಪೂಜೆಯೊಂದಿಗೆ ಚಾಲನೆ ನೀಡಿದ್ದಾರೆ

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಆ.27ರಿಂದ ಸೆ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಆ.29ರಂದು ಪೂರ್ವಾರಾಧನೆ, 30ರಂದು ಮಧ್ಯಾರಾಧನೆ ಹಾಗೂ 31ರಂದು ಉತ್ತಾರಾಧನೆ ಜರುಗಲಿದೆ. ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ ಚಾಲನೆ ನೀಡಲಾಗುವುದು.

ಇಂದು ಸಂಜೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಗೋ, ಗಜ, ಅಶ್ವ, ಧಾನ್ಯ, ಲಕ್ಷ್ಮಿ ಪೂಜೆಯೊಂದಿಗೆ ಚಾಲನೆ ನೀಡಿದ್ದಾರೆ

ಆ.29ರಂದು ಉತ್ತಾರಾಧನೆ ನಡೆಯಲಿದ್ದು, ಅಂದು ಸಂಜೆ ಅನುಗ್ರಹ ಪ್ರಶಸ್ತಿ ಪ್ರದಾನ ಜರುಗಲಿದೆ. ಶ್ರೀಮಠದ ಸಂಸ್ಕೃತ ಪಾಠಶಾಲೆಯ ಪ್ರಾಚಾರ್ಯರಾದ ನಾಗರ ಹಳ್ಳಿ ವಾದಿರಾಜಾಚಾರ್ಯ ಹಾಗೂ ತಾಂಜಾ ವೂರಿನ ಶಾಸ್ತ್ರ ವಿಶ್ವವಿದ್ಯಾಲಯದ ಉಪ ಕುಲಪತಿ ವೈದ್ಯನಾಥನ್‌ ಸುಬ್ರಮಣಿಯನ್‌ ಅವರಿಗೆ ಈ ಬಾರಿ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಆ.30ರಂದು ಮಧ್ಯಾರಾಧನೆ ಜರುಗಲಿದ್ದು, ವಿಶೇಷ ಪಂಚಾಮೃತ ಅಭಿಷೇಕ ಜರುಗಲಿದೆ. ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ಚಿನ್ನದ ರಥೋತ್ಸವ ಜರುಗಲಿದೆ. ಆ.31ರಂದು ಉತ್ತಾರಾಧನೆ ಜರುಗಲಿದ್ದು, ವಸಂತೋತ್ಸವ ಹಾಗೂ ಮಠದ ರಥಬೀದಿಯಲ್ಲಿ ರಾಯರ ರಥೋತ್ಸವ ಜರುಗಲಿದೆ.

ಸೆ.1ರಂದು ಶ್ರೀಮಠದ ಪೂರ್ವ ಪೀಠಾಧಿಪತಿಗಳಾದ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ ಜರುಗಲಿದೆ. ಸೆ.2ರಂದು ಸರ್ವ ಸಮರ್ಪಣ ಮಹೋತ್ಸವದೊಂದಿಗೆ ಆರಾಧನಾ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ