ಬುಕ್ ಸೈಟ್

ಗೆಲಿಲಿಯೋ

ವಸಂತ ಪ್ರಕಾಶನ ಪ್ರಕಟಿಸುತ್ತಿರುವ ಈ ವಿಖ್ಯಾತರ ವ್ಯಕ್ತಿಚಿತ್ರ ಮಾಲೆಯಲ್ಲಿ ಧರ್ಮ, ತತ್ವಶಾಸ್ತ್ರ, ಚರಿತ್ರೆ,...

ವಸಂತ ಪ್ರಕಾಶನ ಪ್ರಕಟಿಸುತ್ತಿರುವ ಈ ವಿಖ್ಯಾತರ ವ್ಯಕ್ತಿಚಿತ್ರ ಮಾಲೆಯಲ್ಲಿ ಧರ್ಮ, ತತ್ವಶಾಸ್ತ್ರ, ಚರಿತ್ರೆ, ವಿಜ್ಞಾನ, ಅರ್ಥಶಾಸ್ತ್ರ, ಪರಿಸರ, ಉದ್ಯಮ, ರಾಜಕೀಯ, ಸಮಾಜ ಸುಧಾರಣೆ, ಸಾಹಿತ್ಯ , ಸಂಗೀತ , ಲಲತಿಕಲೆ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನೂ ಅದ್ವಿತೀಯ ಸಾಧನೆಗಳನ್ನೂ ಮಾಡಿದ ಮೇಧಾವಿಗಳ ಜೀವನಚಿತ್ರಗಳಿನೆ, ಇವುಗಳಲ್ಲಿ ಪ್ರತಿಯೊಬ್ಬ ಮೇಧಾವಿಯ ವಿಚಾರಗಳನ್ನು ಅವರ ಕಾಲದ ಸಮಾಜಿಕ ಹಾಗೂ ಬೌದ್ಧಿಕ ಪರಿಸರದಲ್ಲಿಟ್ಟು ವಿಶ್ಲೇಷಿಸಲಾಗಿದೆ. ಸಮಾಜದ ಮೇಲೆ ಆ ಮೇಧಾವಿ ಬೀರಿದ ಪ್ರಭಾವ , ಮನುಷ್ಯನನ್ನೂ ಪರಿಸರವನ್ನೂ ಅರ್ಥಮಾಡಿಕೊಳ್ಳುವ ದಿಸೆಯಲ್ಲಿ ಅವರು ನೀಡಿರುವ ನಿರ್ದಿಷ್ಟ ಕೊಡುಗೆ, ಅವರ ವಿಚಾರಗಳ ಸ್ಫೂರ್ತಿಯಿಂದ ರೂಪುಗೊಂಡಿರುವ ಜೀವನಕ್ರಮ, ಇವುಗಳನ್ನೂ ವಿವರಿಸಲಾಗಿದೆ. ಸಾಧ್ಯವಾದ ಕಡೆಗಳೆಲ್ಲೆಲ್ಲ ಮೇಧಾವಿಗಳ ಮಾತುಗಳಿಂದ, ಬರವಣಿಗೆಗಳಿಂದ ಸೂಕ್ತವೆಂದು ಕಂಡುಬಂದ ಭಾಗಗಳನ್ನು ಉದ್ಧರಿಸಲಾಗಿದೆ. ಹೊಸ ಸಿದ್ಧಾಂತಗಳನ್ನು ಸೃಷ್ಟಿಸಿದವರ, ಹೊಸ ಚಳವಳಿಗಳನ್ನು ಸ್ಥಾಪಿಸಿದವರ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮಹತ್ವದ ಪ್ರಭಾವವೂ ಘನತೆಯೂ ಇದ್ದು, ಹೊಸ ಆವಿಷ್ಕಾರಗಳನ್ನೋ ಅಧ್ವಿತೀಯ ಸಂಯೋಜನೆಯನ್ನೋ ಮಾಡಿದವರ ಬಗೆಗೆ ವಿಶೇಷ ಗಮನ ನೀಡಲಾಗಿದೆ. ಒಟ್ಟಿನಲ್ಲಿ ಈ ಪುಸ್ತಕಗಳು ಸಂತೋಷದಿಂದ ಓದಬಲ್ಲ ಕೃತಿಗಳಾಗಿರುವಂತೆಯೇ ನಮ್ಮ ನಾಗರಿಕತೆಯನ್ನು, ಅದರ ವಿಕಾಸದ ವೈಚಾರಿಕ ಹಾಗೂ ಆಧ್ಯಾತ್ಮಿಕ ಸ್ರೋತಗಳನ್ನು, ಭವಿಷ್ಯದ ಒಲವು ನಿಲುವುಗಳನ್ನು ಆಳವಾಗಿ ಅರಿಯವಲು ಸಹಾಯಕವಾಗಿವೆ. ಇವುಗಳನ್ನು ಓದುವ ಮೂಲಕ ತಮ್ಮ ಜೀವನದರ್ಶನ ಏನೆಂದು ಸ್ಪಷ್ಟಪಡಿಸಿಕೊಳ್ಳಬಲ್ಲ ಕೆಲವರಾದರೂ ಭವಿಷ್ಯದಲ್ಲಿ ಸ್ವತಃ ಮೇಧಾವಿಗಳಾದರೆ ಆಶ್ಚರ್ಯವಿಲ್ಲ.


ಈ ವಾರದ ಹೊತ್ತಗೆ : ಗೆಲಿಲಿಯೋ
(ವಿಖ್ಯಾತರ ವ್ಯಕ್ತಿ ಚಿತ್ರಮಾಲೆ)
ಲೇಖಕರು: ಸಿಡ್ನಿ ಶ್ರೀನಿವಾಸ್

ಪ್ರಕಾಶನ: ವಸಂತ ಪ್ರಕಾಶನ
ನಂ.360, 10ನೇ ಬಿ ಮುಖ್ಯರಸ್ತೆ
3ನೇ ಬ್ಲಾಕ್ ಜಯನಗರ, ಬೆಂಗಳೂರು
560011

ಬೆಲೆ: 35 ರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

Thyroid Cancer: ಗುರುತೇ ಸಿಗಲಾರದಷ್ಟು ಬದಲಾದ ನಟ! 'ರಾಯ್' ಗೆ ಬೇಕಾಗಿದೆ ನೆರವಿನ ಹಸ್ತ..Video

SCROLL FOR NEXT