ರಾಜ್ಯ

'ಪಶು' ಭಾಗ್ಯ ಯೋಜನೆ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ತಮ್ಮ ದಾಖಲೆಯೆ 10ನೇ ಬಜೆಟ್ನಲ್ಲಿ 'ಪಶು' ಭಾಗ್ಯ ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯ ಅವರು ಹಸು, ಕೋಳಿ, ಕುರಿ, ಮೇಕೆ ಸಾಕಲು ಪಶು ಭಾಗ್ಯ ಯೋಜನೆ ಜಾರಿಗೆ ತರುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದು, ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ 1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ.ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25ರಷ್ಟು ಬ್ಯಾಂಕ್ ಎಂಡೆಡ್ ಸಹಾಯಧನ ಒದಗಿಸಲಾಗುವುದು ಎಂದು ತಿಳಿಸಿದರು.

ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರು. 50, 000 ವರೆಗೆ, ಪಶು ಆಹಾರ/ಇತರೆ ನಿರ್ವಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು ಎಂದು ಹೇಳಿದರು.

SCROLL FOR NEXT