ಭಾರತೀಯ ರೈಲ್ವೆಯಲ್ಲಿ ವಿಶ್ವದ ಮೊದಲ ಜೈವಿಕ ಶೌಚಾಲಯ
ಇದೇ ಮೊದಲ ಬಾರಿಗೆ ದೀಬ್ರುಗಢ ರಾಜಧಾನಿ ಎಕ್ಸ್ಪ್ರೆಸ್ ರೈಲುನಲ್ಲಿ ಜೈವಿಕ ಶೌಚಾಲಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ...
ನವದೆಹಲಿ: ಇದೇ ಮೊದಲ ಬಾರಿಗೆ ದೀಬ್ರುಗಢ ರಾಜಧಾನಿ ಎಕ್ಸ್ಪ್ರೆಸ್ ರೈಲುನಲ್ಲಿ ಜೈವಿಕ ಶೌಚಾಲಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.
ಭಾರತೀಯ ರೈಲಿನಲ್ಲಿ ವಿಶ್ವದ ಮೊಟ್ಟ ಮೊದಲ ಜೈವಿಕ ಶೌಚಾಲಯಗಳನ್ನು (ಬಯೋ ಟಾಯ್ಲೆಟ್) ಭಾರತೀಯ ರೈಲ್ವೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಸುರೇಶ್ ಪ್ರಭು ಅವರು ಹೇಳಿದ್ದಾರೆ.
17,000 ಜೈವಿಕ ಶೌಚಾಲಯ ಮತ್ತು 475 ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚುವರಿ ಶೌಚಾಲಯಗಳನ್ನು ಪ್ರಸ್ತುತ ಹಣಕಾಸು ವರ್ಷದಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಭು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.