ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2016-17ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ಡಿ.ವಿ ಗುಂಡಪ್ಪನವರ ಮಂಕುತಿಮ್ಮನ ಕಗ್ಗದೊಂದಿಗೆ ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ, ರಾಜ್ಯದ ಜನರಿಗೆ ನೀಡಿದ್ದ ಬಹುತೇಕ ಭರವಸೆ ಈಡೇರಿಕೆಯಾಗಿದೆ ಎಂದು ಹೇಳಿದ್ದಾರೆ.
ಅವಕಾಶ ಮತ್ತು ಶೋಷಿತರ ಅಭ್ಯುದಯಕ್ಕೆ ನಮ್ಮ ಸರ್ಕಾರ ಆಧ್ಯತೆ ನೀಡಲಿದ್ದು, ಅಲ್ಲ ಸಂಖ್ಯಾತರು ಸೇರಿದಂತೆ ಸಮಾಜಮುಖಿ ಅಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಪ್ರಗತಿ ಪಥದತ್ತ ಸಾಗುತ್ತಿರುವ ಸಮಾಜಮುಖಿ ಸರ್ಕಾರ ನಮ್ಮದಾಗಿದೆ. ಬಂಡವಾಳ ಹೂಡಿಕೆದಾರರ ಸಮಾವೇಶವೂ ನಮ್ಮ ಸಾಧನೆಯಾಗಿದೆ. ಅಂತಾರಾಷ್ಟ್ರೀಯ ಕೈಗಾರಿಕೋದ್ಯಮಿಗಳಿಂದ ರಾಜ್ಯ ಸರ್ಕಾರದ ಕೈಗಾರಿಕಾ ಸ್ನೇಹಿ ನೀತಿಗೆ ಶ್ಲಾಘನೆ ಸಿಕ್ಕಿದೆ.