ಸಿದ್ದರಾಮಯ್ಯ 
ರಾಜ್ಯ ಬಜೆಟ್

ಬಜೆಟ್ ನಲ್ಲಿ ಐಟಿ ಕ್ಷೇತ್ರಕ್ಕೆ ಸಿಕ್ಕಿದ್ದು...

ಸಿಎಂ ಸಿದ್ದರಾಮಯ್ಯ 2016-17 ನೇ ಸಾಲಿನ ಬಜೆಟ್ ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ 222 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ 2016-17 ನೇ ಸಾಲಿನ ಬಜೆಟ್ ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ 222 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ ಉತ್ಕೃಷ್ಟ ಸಾಧನ ಸಲಕರಣೆ ಮತ್ತು ಪ್ರಯೋಗಾಲಯ ಸೌಲಭ್ಯಗಳಿಗೆ ಅವಕಾಶ ಕಲ್ಪಿಸಲು 56 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರ  ಕಾರ್ಯಾರಂಭ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ನವೋದ್ಯಮಗಳ ಬೆಳವಣಿಗೆಗಾಗಿ ಇನ್ ಕ್ಯುಬೇಟರ್ ಗಳ ಸ್ಥಾಪನೆ ಮಾಡುವ ಬಗ್ಗೆ ಬಜೆಟ್ ನಲ್ಲಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ನ್ಯೂ ಏಜ್ ಇನ್ ಕ್ಯುಬೇಷನ್ ನೆಟ್ ವರ್ಕ್ ಅಡಿ ರಾಜ್ಯಾದ್ಯಂತ ಸ್ನಾತಕೋತ್ತರ ಮತ್ತು ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 10 ಹೊಸ ಇನ್ ಕ್ಯುಬೇಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜೈವಿಕ ತಂತ್ರಜ್ಞಾನ ಕ್ಷೆತ್ರದಲ್ಲಿ ಇನ್ಯುಬೇಟರ್ ಗಳ ಸ್ಥಾಪನೆಯೊಂದಿಗೆ 4 ಟೆಕ್ನಾಲಜಿ ಬಿಸಿನೆಸ್ ಇಂಕ್ಯುಂಬೇಟರ್ ಗಳ ಸ್ಥಾಪನೆಗೆ ಬಜೆಟ್ ನಲ್ಲಿ ಭರವಸೆ ದೊರೆತಿದೆ. ಬೆಂಗಳೂರು ಮತ್ತು ಶಿವಮೊಗ್ಗ, ಬಾಗಲಕೋಟೆ ಮತ್ತು ಕಲಬುರ್ಗಿ ಐಟಿ ಪಾರ್ಕ್ ಗಳಲ್ಲಿ ಕೊಯೋನಿಕ್ಸ್ ಸಂಸ್ಥೆ ಇನ್ ಕ್ಯುಬೇಟರ್ ಮತ್ತು ಸಾಮಾನ್ಯ ಇನ್ಸ್ ಟ್ರುಮೆಟೇಷನ್ ಸೌಲಭ್ಯ ಒದಗಿಸಲಿದೆ.

ಇನ್ನು ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ ತಾಲೂಕುಗಳ 500 ಪ್ರೌಢಶಾಲೆಗಳಿಗೆ ಸೈನ್ಸ್ ಲ್ಯಾಬ್- ಇನ್ ಎ ಬಾಕ್ಸ್ ಕಿಟ್ ಗಳನ್ನು ವಿತರಿಸುವ ಮುಖಾಂತರ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮೂಲವಿಜ್ಞಾನದ ಬೋಧನೆ ಮತ್ತು ಕಲಿಕಾ ಸಾಮರ್ಥ್ಯವನ್ನು ಬಲಪಡಿಸಲು ಹಾಗು ವಿಜಯಪುರದಲ್ಲಿ ಕಿರು ತಾರಾಯಾಲಯವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ವಿನೂತನ ಇ-ಆಡಳಿತ ಯೋಜನೆಗಳಿಗೆ ಧನಸಹಾಯ ನೀಡುವುದು, ನಾಗರಿಕ ಸ್ನೇಹಿ ಇ-ಆಡಳಿತ ಯೋಜನೆಗಳನ್ನು ರಾಜ್ಯಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಇಲಾಖೆಗಳು, ಸಂಸ್ಥೆಗಳಿಗೆ ಪ್ರಶಸ್ತಿ ನೀಡುವುದು ಬಜೆಟ್ ನಲ್ಲಿ ಐಟಿ ಕ್ಷೇತ್ರಕ್ಕೆ ಸಿಕ್ಕ ಅನುದಾನಗಳಲ್ಲಿ ಪ್ರಮುಖವಾದ ಅಂಶಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT