ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಅಮ್ಮ ಕ್ಯಾಂಟೀನ್ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಮ್ಮ ಕ್ಯಾಂಟೀನ್ ಹಾಗೂ ರಾಜ್ಯದ ಇತರೆ 30 ಜಿಲ್ಲೆಗಳಲ್ಲಿ ಸವಿರುಚಿ ಮೊಬೈಲ್ ಕ್ಯಾಂಟೀನ್ ಆರಂಭಿಸುವುದಾಗಿ ಬುಧವಾರ ತಮ್ಮ 12ನೇ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು 2017-18ನೇ ಸಾಲಿನ ಬಜೆಟ್ ಮಂಡಿಸಿದಿ ಸಿಎಂ, ಬೆಂಗಳೂರು ಕಡಿಮೆ ದರದಲ್ಲಿ ಆಹಾರ ಸಿಗುವ 198 ನಮ್ಮ ಕ್ಯಾಂಟೀನ್ ಆರಂಭಿಸಿ, 5 ರುಪಾಯಿಗೆ ತಿಂಡಿ ಹಾಗೂ 10 ರುಪಾಯಿಗೆ ಊಟ ನೀಡಲಾಗುವುದು ಮತ್ತು ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಗಳ ಮೂಲಕ ಸವಿರುಚಿ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಜನಸಾಮಾನ್ಯರಿಗೆ ಹತ್ತಿರವಾಗಲು ಬೆಂಗಳೂರಿನ 198 ವಾರ್ಡ್ ಗಳಲ್ಲಿ ನಮ್ಮ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 100 ಕೋಟಿ ರುಪಾಯಿಯನ್ನು ಈ ಬಾರಿಯ ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ.