ರಾಜ್ಯ ಬಜೆಟ್

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿ, ಬಿಜೆಪಿಯಿಂದ ಹೋರಾಟ: ಶೆಟ್ಟರ್

Lingaraj Badiger
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಇದೊಂದು ರೈತ ವಿರೋಧಿ ಬಜೆಟ್ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಬಜೆಟ್ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹೈದರಾಬಾದ್ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನೆ ಘೋಷಿಸಬೇಕಿತ್ತು ಎಂದಿದ್ದಾರೆ.
ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದ್ದು, ಸಾಲ ಮನ್ನಾಗೆ ಒತ್ತಾಯಿಸಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಶೆಟ್ಟರ್ ಹೇಳಿದ್ದಾರೆ. 
ಮತ್ತೊಂದೆಡೆ ರಾಜ್ಯದಲ್ಲಿ ಬರಗಾಲದಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ, ರೈತರಿಗೆ ಯಾವುದೇ ವಿಶೇಷ ಸೌಲಭ್ಯ ಒದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು ಕೋಲಾರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
SCROLL FOR NEXT