ಬೆಂಗಳೂರು: 2017-18 ಸಾಲಿನ ಆಯವ್ಯಯ ಪಟ್ಟಿ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ಮೈಸೂರಿನ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಣ ಮೀಸಲಿಟ್ಟಿದ್ದು, ಮುಂದಿನ 2 ವರ್ಷಗಳ ಅವಧಿಯಲ್ಲಿ ಚಿತ್ರನಗರಿ ತಲೆ ಎತ್ತಲಿದೆ. ಅಂತೆಯೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿನ ಟಿಕೆಟ್ ದರವನ್ನು 200ರು, ಗೆ ನಿಗದಿ ಪಡಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಅಂತೆಯೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಚಿತ್ರಪ್ರದರ್ಶನ ಕಡ್ಡಾಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಮಾಸಾಶಾನ 8ರಿಂದ 10 ಸಾವಿರಕ್ಕೆ ಏರಿಕೆ
ಜಿಲ್ಲಾ ಕೇಂದ್ರಗಳಲ್ಲಿನ ಪತ್ರಕರ್ತರಿಗೆ ಉಚಿತ ಬಸ್, ನಿವೃತ್ತ ಪತ್ರಕರ್ತರ ಮಾಸಾಶಾನ 8ರಿದಂದ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಚಿತ್ರರಂಗದ ಧನ್ಯವಾದ
ಇದೇ ವೇಳೆ ಚಿತ್ರನಗರಿ ಸ್ಥಾಪಿಸುವ ಸರ್ಕಾರದ ನಿರ್ಧಾರಕ್ಕೆ ಕನ್ನಡ ಚಿತ್ರರಂಗ ಹರ್ಷ ವ್ಯಕ್ತಪಡಿಸಿದ್ದು, ಮಲ್ಟಿಪ್ಲೆಕ್ಸ್ ಕಳಲ್ಲಿ ಕನ್ನಡ ಚಿತ್ರ ಪ್ರದರ್ಶನ ಕಡ್ಡಾಯಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಧನ್ಯವಾದ ತಿಳಿಸಿದೆ.