ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಸಿದ್ದು ಬಜೆಟ್ ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಬಧವಾರ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಧವಾರ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.
ಪೌಷ್ಟಿಕಾಂಶ ಕೊರತೆಯನ್ನು ನಿವಾರಿಸಲು ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೂ 'ಮಾತೃ  ಪೂರ್ಣ' ಯೋಜನೆಯನ್ನು ವಿಸ್ತರಿಸಲು ಉದ್ದೇಶಿಸಲಾಗಿದ್ದು,  ಜುಲೈ ತಿಂಗಳಿನಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಿದ್ಧಪಡಿಸಿದ ಬಿಸಿಯೂಟವನ್ನು ಒದಗಿಸಲಾಗುವುದು. ಇದಕ್ಕಾಗಿ 32 ಕೋಟಿ ರು.ಗಳನ್ನು ಒದಗಿಸಲಾಗುವುದು.
ಎಲ್ಲ ಅಂಗನವಾಡಿಯ ಮಕ್ಕಳಿಗೆ ಮುಂದಿನ ಜೂನ್ ತಿಂಗಳಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ. ಇದಕ್ಕಾಗಿ 47 ಕೋಟಿ ರು. ವೆಚ್ಚ, ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ 3 ದಿನಗಳು ವಿತರಿಸುತ್ತಿರುವ ಹಾಲನ್ನು ಜುಲೈ ತಿಂಗಳಿನಿಂದ 5 ದಿನಗಳಿಗೆ ಹೆಚ್ಚಿಸಿ ವಿತರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ ನೀಡುವ ಗೌರವಧನವನ್ನು ಅನುಕ್ರಮವಾಗಿ 1,500 ರುಗಳು ಮತ್ತು  750 ರು.ಗಳಷ್ಟು ಹೆಚ್ಚಿಸಲಾಗಿದೆ.  ಪ್ರಸಕ್ತ ಸಾಲಿನಲ್ಲಿ  ಈ ಮೊತ್ತವನ್ನು ಅನುಕ್ರಮವಾಗಿ 1000 ರು. ಹಾಗೂ  500 ರು.ಗಳಷ್ಟು ಹೆಚ್ಚಿಸಲಾಗುವುದು. ಇದಕ್ಕಾಗಿ  ಆಯವ್ಯಯದಲ್ಲಿ 115 ಕೋಟಿ ಮತ್ತು ಸಹಾಯಕರಿಗೆ ರಕ್ಷಣೆ ಒದಗಿಸಲು ಕರ್ನಾಚಕ ಸರ್ಕಾರದಿಂದ ಅಪಘಾತ ವಿಮೆ ಯೋಜನೆಯನ್ನು ಸಹ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ App. ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗಾಗಿ 145 ಚಿಕಿತ್ಸಾ ಘಟಕ ಸ್ಥಾಪನೆ.
ಹೆಚ್ ಐವಿ ಸೋಂಕಿತ ಹಾಗೂ ಬಾಧಿತರಾದವರಿಗೆ ಪಾಲನೆ ಯೋಜನೆಯಡಿ 25,000 ಮಕ್ಕಳಿಗೆ ನೀಡಲಾಗುವ ಧನ ಸಹಾಯವನ್ನು ಮಾಸಿಕ 800 ರೂಗಳಿಂದ 1,000 ರೂಗಳಿಗೆ ಹೆಚ್ಚಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಅಪಘಾತ ವಿಮೆ, ಸಾಧನಾ ಯೋಜನೆಯಡಿಯಲ್ಲಿ ನೀಡುವ ಆರ್ಥಿಕ ನೆರವು 30000 ದಿಂದ 50000 ಕ್ಕೆ ಏರಿಕೆ ಮಾಡಲಾಗಿದೆ. ಮತ್ತು ದೇವದಾಸಿ ಪದ್ಧತಿಯಿಂದ ಹೊರಬಂದವರಿಗೆ 25,000 ರೂ. ಪ್ರೋತ್ಸಾಹ ಧನ, 25,000 ಸಾವಿರದ ವರೆಗೆ ಸಾಲ ಸೌಲಭ್ಯ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಕಾರ ಸಂಘಗಳ ಮೂಲಕ ಶೇಕಡ 4ರ ಬಡ್ಡಿದರದಲ್ಲಿ ವಿತರಿಸಲಾಗುತ್ತಿರುವ ಸಾಲವನ್ನು ಈ ಸಾಲಿನಿಂದ ಶೂನ್ಯ ಬಡ್ಡಿದರದಲ್ಲಿ ವಿತರಣೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT