ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ 
ಕೇಂದ್ರ ಬಜೆಟ್

ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಮುಂದೂಡಬೇಕು: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕು ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕು ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಕೇರಳ ಸಂಸದ ಇ ಅಹಮದ್ ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ 2017ನೇ ಸಾಲಿನ ಬಜೆಟ್ ಅನ್ನು ನಾಳೆಗೆ ಮುಂದೂಡಬೇಕು ಎಂದು ಕೇಳಿಬರುತ್ತಿರುವ ಕೇರಳ ಸಂಸದರ ಆಗ್ರಹಕ್ಕೆ  ಇದೀಗ ಕಾಂಗ್ರೆಸ್, ಶಿವಸೇನೆ ಸೇರಿದಂತೆ ವಿವಿಧ ಪಕ್ಷಗಳು ಬೆಂಬಲ ನೀಡಿವೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ಅಭಿಪ್ರಾಯದಂತೆ ಕಲಾಪವನ್ನು ಹಾಗೂ ಬಜೆಟ್ ಮಂಡನೆಯನ್ನು ನಾಳೆ ಮುಂದೂಡಬೇಕು. ಈ ಬಗ್ಗೆ ನಾನು ಸೇರಿದಂತೆ ಮಾಜಿ  ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಜೆಡಿಯು ಮುಖಂಡರು ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಅಂತೆಯೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಸರ್ಕಾರಕ್ಕೆ ಅಹ್ಮದ್ ಅವರು ಸಾವನ್ನಪ್ಪಿರುವ ಕುರಿತು ಮೊದಲೇ ತಿಳಿದಿದೆ. ಆದರೂ ಈ ವಿಚಾರವನ್ನು ತಡವಾಗಿ ಹೊರ ಹಾಕಿದ್ದಾರೆ. ಇದೇನು ಮಾರ್ಚ್ 31 ಅಲ್ಲ. ಆದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆಗೆ ಆತುರ ಪಡುತ್ತಿದೆ. ಬಜೆಟ್ ಮುಂದೂಡುವುದರಿಂದ ವ್ಯತಿರಿಕ್ತ ಪರಿಣಾಮವೇನೂ ಆಗುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಡೆ ನಿಜಕ್ಕೂ ಅಮಾನವೀಯಯವಾಗಿದ್ದು, ಅಹ್ಮದ್ ಸಾವಿನ ವಿಚಾರ ಬಹಿರಂಗ ಪಡಿಸಲು ತಡ ಮಾಡಬಾರದಿತ್ತು ಎಂದು ಅವರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT