ಅರುಣ್ ಜೇಟ್ಲಿ 
ಕೇಂದ್ರ ಬಜೆಟ್

ರಾಜಕೀಯ ಪಕ್ಷಗಳಿಗೆ ಬಜೆಟ್ ಶಾಕ್: ನಗದು ದೇಣಿಗೆ ಮಿತಿ 20 ಸಾವಿರದಿಂದ 2 ಸಾವಿರಕ್ಕೆ ಇಳಿಕೆ!

ಕೇಂದ್ರ ಸರ್ಕಾರ 2017-18 ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ರಾಜಕೀಯ ಪಕ್ಷಗಳಿಗೆ ನಗದು ರೂಪದಲ್ಲಿ ನೀಡುವ ದೇಣಿಗೆಯ ಗರಿಷ್ಠ ಮೊತ್ತವನ್ನು 20 ಸಾವಿರದಿಂದ 2 ಸಾವಿರಕ್ಕೆ ಇಳಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ 2017-18 ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ  ರಾಜಕೀಯ ಪಕ್ಷಗಳಿಗೆ ನಗದು ರೂಪದಲ್ಲಿ ನೀಡುವ ದೇಣಿಗೆಯ ಗರಿಷ್ಠ ಮೊತ್ತವನ್ನು 20 ಸಾವಿರದಿಂದ 2 ಸಾವಿರಕ್ಕೆ ಇಳಿಸಿದ್ದಾರೆ. 
ದೇಣಿಗೆ ಪಡೆಯುವ ವಿಷಯದಲ್ಲಿ ರಾಜಕೀಯ ಪಕ್ಷಗಳು ಪಾರದರ್ಶಕತೆ ಕಾಯ್ದುಕೊಳ್ಳಬೇಕಿರುವಂತೆ ಮಾಡಲು ಅರುಣ್ ಜೇಟ್ಲಿ, ರಾಜಕೀಯ ದೇಣಿಗೆಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಕೆಲವು ಕ್ರಮಗಳನ್ನು ಘೋಷಿಸಿದ್ದು, ಓರ್ವ ವ್ಯಕ್ತಿಯಿಂದ  ನಗದು ರೂಪದಲ್ಲಿ ಪಡೆಯಬಹುದಾಗಿದ್ದ ಗರಿಷ್ಠ ದೇಣಿಗೆ ಮೊತ್ತವನ್ನು 20 ಸಾವಿರದಿಂದ 2 ಸಾವಿರಕ್ಕೆ ಇಳಿಕೆ ಮಾಡಿರುವುದು ಪ್ರಮುಖ ಅಂಶವಾಗಿದೆ. 
ಓರ್ವ ವ್ಯಕ್ತಿಯಿಂದ 2 ಸಾವಿರಕ್ಕೂ ಹೆಚ್ಚು ದೇಣಿಗೆ ಪಡೆಯುವುದಿದ್ದರೆ ಚೆಕ್, ಡಿಜಿಟಲ್ ಪಾವತಿ ಮೂಲಕ ದೇಣಿಗೆ ಪಡೆಯಲು ಅವಕಾಶ ನೀಡಲಾಗಿದೆ. ಆದರೆ ದೇಣಿಗೆ ನೀಡುವವರ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯಗೊಳಿಸಲಾಗಿದೆ ಎಂದು ಜೇಟ್ಲಿ ತಿಳಿಸಿದ್ದಾರೆ. ಅರುಣ್ ಜೇಟ್ಲಿ ಅವರ ಘೋಷಣೆಯಿಂದ ಎಗ್ಗಿಲ್ಲದೇ ದೇಣಿಗೆ ರಾಜಕೀಯ ಪಕ್ಷಗಳಿಗೆ ಹೊಡೆತ ಬಿದ್ದಿದ್ದು, ದೇಣಿಗೆ ಪಾವತಿಯಲ್ಲಿ ಪಾರದರ್ಶಕತೆ ತರಲು ಮಹತ್ವದ ನಡೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ