ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ನಿಗದಿಯಂತೆ ಬಜೆಟ್ ಮಂಡನೆ: ಪ್ರಧಾನ ಮಂತ್ರಿ ಕಚೇರಿ ಸ್ಪಷ್ಟನೆ

ಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ನವದೆಹಲಿ: ಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಇ ಅಹಮದ್ ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಜೆಟ್ ಅಧಿವೇಶನ ಮುಂದೂಡಿಕೆಯಾಗುವ ಕುರಿತು ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಧಾನಿ ಕಚೇರಿ ಸ್ಪಷ್ಟನೆ  ನೀಡಿದೆ. ಅದರಂತೆ ನಿಗದಿಯಂತೆಯೇ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 11 ಗಂಟೆಗೆ ಬಜೆಟ್-2017 ಅನ್ನು ಮಂಡಿಸಲಿದ್ದಾರೆ ಎಂದು ಹೇಳಿದೆ. ಅಂತೆಯೇ ಈ ಬಗ್ಗೆ ಸ್ಪೀಕರ್  ಸುಮಿತ್ರಾ ಮಹಾಜನ್ ಅವರು ಸಂಸತ್ ನ ಅಧಿಕಾರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ಬಳಿಕ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದೂ ಪ್ರಧಾನಿ ಕಚೇರಿ ಹೇಳಿದೆ.

ಒಂದು ವೇಳೆ ಸಭೆಯಲ್ಲಿ ಕಲಾಪವನ್ನು ಮುಂದೂಡುವ ನಿರ್ಧಾರ ಕೈಗೊಂಡರೆ ಬಜೆಟ್ ಮಂಡನೆ ನಾಳೆಗೆ ಮುಂದೂಡಿಕೆಯಾಗಲಿದೆ.

ಇಂದು ನಡೆಯುವ ಲೋಕಸಭೆ ಕಲಾಪದಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದಲ್ಲಿ ಮೃತಪಟ್ಟ ಸಂಸದರಿಗೆ ಸಂತಾಪ ಸೂಚಿಸಲಾಗುತ್ತದೆ. ಬಳಿಕ ಬಜೆಟ್ ಅಧಿವೇಶನ ಮುಂದೂವ ಕುರಿತು ಸ್ಪೀಕರ್ ಅಧಿಕೃತ ಘೋಷಣೆ  ಹೊರಡಿಸಲಿದ್ದಾರೆ.

ನೋಟು ನಿಷೇಧ ಬಳಿಕದ ಆರ್ಥಿಕ ಬೆಳವಣಿಗೆ ಹಾಗೂ ಕೇಂದ್ರ ಸರ್ಕಾರದ ನಗದು ರಹಿತ ವಹಿವಾಟು ಗುರಿ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ತೀವ್ರ ಕುತೂಹಲ ಕೆರಳಿಸಿದ್ದು, ಯಾವೆಲ್ಲಾ ವಲಯಗಳಿಗೆ ಬಜೆಟ್ ಎಷ್ಟರ ಮಟ್ಟಿಗೆ  ಉತ್ತೇಜನ ನೀಡಲಿದೆ ಎಂಬುದು ತಿಳಿಯಲಿದೆ. ಅಂತೆಯೇ ರೈಲ್ವೇ ಬಜೆಟ್ ಅನ್ನೂ ಕೂಡ ಕೇಂದ್ರ ಬಜೆಟ್ ನಲ್ಲೇ ವಿಲೀನ ಮಾಡಿರುವುದರಿಂದ ರೈಲ್ವೇ ಬಜೆಟ್ ಕೂಡ ಇಂದೇ ಮಂಡನೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?