ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 26864 ಕೋಟಿ ರು ಅನುದಾನ ನೀಡಿದ್ದಾರೆ. ಅದರಲ್ಲಿ ಪ್ರಾಥಮಿಕ – ಪ್ರೌಢ ಶಿಕ್ಷಣ 22350 ಕೋಟಿ ರು ಮೀಸಲಿರಿಸಲಾಗಿದೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸಲಾಗಿದೆ. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲಿದ್ದಾರೆ,
100 ಪೂರೈಸಿದ ಸರ್ಕಾರಿ ಶಾಲೆಗಳ ನವೀಕರಣಕ್ಕೆ ಆದ್ಯತೆ ನೀಡಲಾಗಿದ್ದು, 100 ಸಂಯೋಜಿತ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ. ಪ್ರತಿ ಶಾಳೆಗೆ 5ಲಕ್ಷದಂತೆ 5 ಕೋಟಿ ರೂ. ವೆಚ್ಚ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಂತಹಂತವಾಗಿ ಸಿಸಿಟಿವಿ ಅಳವಡಿಕೆ. 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯಕ್ಕೆ 5 ಕೋಟಿ ರು ಮೀಸಲು, 7.5 ಕೋಟಿ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯ ಸ್ಫಾಪನೆ ಘೋಷಿಸಲಾಗಿದೆ.
ಉನ್ನತ ಶಿಕ್ಷಣ ಕ್ಷೇತ್ರಕ್ಕೆ 4514 ಕೋಟಿ ರು ಮೀಸಲಿಟ್ಟಿರುವ ಸಿಎಂ ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ, ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪನೆ. ಬಸವ ಅಧ್ಯಯನ ಕೇಂದ್ರ ಸ್ಥಾಪನೆಗೆ 2 ಕೋಟಿ ಅನುದಾನ, ಬಾಗಲಕೋಟೆ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ, ಉನ್ನತ ಶಿಕ್ಷಣ ಪಡೆಯುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ, ಧಾರವಾಡ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠಕ್ಕೆ 1 ಕೋಟಿ ಮೀಸಲಿಡಲಾಗಿದೆ, 5 ಹೊಸ ಮಹಿಳಾ ಪದವಿಪೂರ್ವ ಕಾಲೇಜು ಸ್ಥಾಪನೆ, 25 ವಿದ್ಯಾರ್ಥಿನಿ ನಿಲಯ, 4 ಬಿ.ಎಡ್ ಹಾಗೂ ಡಿ,ಎಡ್ ಕಾಲೇಜುಗಳ ಸ್ಥಾಪನೆ,25 ಹೊಸ ಮೊರಾರ್ಜಿ ದೇಸಾಯಿ ಶಾಲೆ ಆರಂಭ. ಬಿ.ಎಡಿ ಮತ್ತು ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 25 ಸಾವಿರ ರು ಪ್ರೋತ್ಸಾಹ ಧನ ಘೋಷಿಸಲಾಗಿದೆ.
ವೈದ್ಯಕೀಯ ಶಿಕ್ಷಣಕ್ಕಾಗಿ 2,177 ಕೋಟಿ ರೂ ಮೀಸಲಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗದಗ, ಕೊಪ್ಪಳ ಚಾಮರಾಜನಗರದ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ನೀಡಿದ್ದಾರೆ.
ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 7.81 ಕೋಟಿ ರೂ. ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ, ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಪೆಟ್ ಸಿಟಿ ಸ್ಕ್ಯಾನ್ ವ್ಯವಸ್ಥೆ, ಮೈಸೂರು ನರ್ಸಿಂಗ್ ಕಾಲೇಜಿಗೆ 30 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ, ಬೀದರ್, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಸ್ಥಾಪನೆ, ಗುಲ್ಬರ್ಗಾ ವೈದಕೀಯ ಕಾಲೇಜಿನಲ್ಲಿ ಸುಟ್ಟಗಾಯಗಳ ವಾರ್ಡ್ ನಿರ್ಮಾಣಕ್ಕೆ ಯೋಜಿಸಲಾಗಿದೆ.
ಮೈಸೂರು, ಕಾರವಾರ ವೈದಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ, ನರ್ಸಿಂಗ್ ಕಾಲೇಜುಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ ನೀಡಲಾಗಿದೆ. ಐಐಟಿ, ಐಐಎಸ್‌ಸಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವ ಎಸ್‌ಸಿ/ ಎಸ್‌ಟಿ ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ ಸಹಾಯಧನ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics