ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರೂ.5,371 ಕೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿರುವ ಬಡೆಟ್ ನಲ್ಲಿ ....

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಬಡೆಟ್ ನಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕೆ ವಿಶೇಷ ಯೋಜನೆಗಳು ಮತ್ತು ನೆರವುಗಳನ್ನು ಒದಗಿಸಿದ್ದಾರೆ.
  • 2018-19ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟಾರೆ 5,371 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ. 
  • ಎಲ್ಲಾ ಪೊಲೀಸ್ ಸ್ಟೇಷನ್ ಗಳು ಮತ್ತು ಕಚೇರಿಗಳಲ್ಲಿ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ, ಎಲ್ಲಾ ಪೊಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳ ಸ್ಥಾಪನೆ
  • ಮುಂದಿನ 5 ವರ್ಷಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇಕಡಾ 25ರಷ್ಟು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ.
  •  ನಗರ ಪ್ರದೇಶಗಳಲ್ಲಿ ಹೊಸದಾಗಿ 250 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು 17,50 ಕೋಟಿ ರೂ, ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಪ್ರದೇಶಗಳಲ್ಲಿ  ಅವರ ಮಕ್ಕಳ ಪಾಲನೆ ಮಾಡಲು 100 ಸಂಚಾರಿ ಅಂಗನವಾಡಿ ಕೇಂದ್ರ. ಶಿಶು ಪಾಲನಾ  ಕೇಂದ್ರಗಳ ಸ್ಥಾಪನೆಗೆ 10 ಕೋಟಿ,
  • ಮಹಿಳಾ ಇಲಾಖೆಯ ಮೇಲ್ವಿಚಾರಕಿಯರ ಕಾರ್ಯದಕ್ಷತೆಯನ್ನು ಹೆಚ್ಚಿಸಲು 2,503  ಮೇಲ್ವಿಚಾರಕಿಯರಿಗೆ ಕರ್ನಾಟಕ ಮಹಿಳಾ ಅಭಿವೃದ್ದಿ  ನಿಗಮದ  ಮೂಲಕ ಸ್ಕೂಟರ್ ಖರೀದಿಸಲು 50,000ರೂ. ಬಡ್ಡಿ ರಹಿತ ಸಾಲ. ಇದರ ಜತೆಗೆ ಇಂಧನ ವೆಚ್ಚಕ್ಕಾಗಿ  ಮಾಸಿಕ 1000 ರೂಪಾಯಿ  ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.
  •  ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ 1000 ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಉನ್ನತೀಕರಿಸಲು ಉದ್ದೇಶ. ಇದಕ್ಕಾಗಿ  20 ಕೋಟಿ ರೂಪಾಯಿ,
  •  ರಾಜ್ಯದಲ್ಲಿ ಹೆಚ್‍ಐವಿ/ಏಡ್ಸ್ ನಿಂದ ಬಾಧಿತರಾದ, ಕುಟುಂಬ ಮತ್ತು ಸಮಾಜದಿಂದ ನಿರ್ಲಕ್ಷಿತರಾದ  ಮಹಿಳೆಯರ ಪೋಷಣೆ ಮತ್ತು ರಕ್ಷಣೆಗಾಗಿ ವಿಭಾಗೀಯ ಮಟ್ಟದಲ್ಲಿ  ಆಶ್ರಯ ಕೇಂದ್ರ ಸ್ಥಾಪಿಸಲು  ಸ್ವಯಂ ಸೇವಾ ಸಂಸ್ಥೆಗಳಿಗೆ ಒಟ್ಟು 1 ಕೋಟಿ ಅನುದಾನ,  
  • ಬಾಲ ಮಂದಿರಗಳು ಮತ್ತು ವೀಕ್ಷಣಾಲಯಗಳಲ್ಲಿನ ಮಕ್ಕಳಿಗೆ ಇಂಗ್ಲಿಷ್ ಭಾಷೆ, ಕಾನೂನು ವಿಷಯ, ಕ್ರೀಡೆ, ಲಲಿತ ಕಲೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆಗಾಗಿ  ಹಾಗೂ ಅವರ ಜೀವನಕ್ಕೆ ಪೂರಕವಾದ   ಕೌಶಲ್ಯ ಅಭಿವೃದ್ಧಿ   ತರಬೇತಿ ನೀಡಲು 1 ಕೋಟಿ ಅನುದಾನ, 
  • ಆಯ್ದ 10 ಜಿಲ್ಲೆಗಳಲ್ಲಿ  ಕಾರ್ಯ ನಿರ್ವಹಿಸುತ್ತಿರುವ ಮಕ್ಕಳ ನ್ಯಾಯಾಲಯವನ್ನು  ಮಕ್ಕಳ ಸ್ನೇಹಿ ನ್ಯಾಯಾಲಯಗಳನ್ನಾಗಿ ಪರಿವರ್ತಿಸಲು 3 ಕೋಟಿ  ಅನುದಾನ ನೀಡಲಿದೆ.
  •  ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿ 1 ಲಕ್ಷದಿಂದ 3 ಲಕ್ಷಕ್ಕೆ ಏರಿಕೆ ಮಾಡಿರುವ ಸರ್ಕಾರ ನಗರ ಪ್ರದೇಶದಲ್ಲಿ ಹೊಸದಾಗಿ 250 ಅಂಗನವಾಡಿ ಕೇಂದ್ರ ಸ್ಥಾಪನೆ ಮತ್ತು ಕೂಲಿ ಕಾರ್ಮಿಕರಿರುವ ಪ್ರದೇಶದಲ್ಲಿ 100 ಸಂಚಾರಿ ಅಂಗನವಾಡಿ ಕೇಂದ್ರ ಸ್ಥಾಪಿಸಲಾಗುವುದು ಮತ್ತು 1000 ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಉನ್ನತೀಕರಣ 
  •  2018-19ನೇ ಸಾಲಿನಿಂದ ಶೇಕಡಾ  75ಕ್ಕೂ ಹೆಚ್ಚಿನ ಅಂಗವೈಕಲ್ಯತೆ ಹೊಂದಿರುವ ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನವನ್ನು 200 ರೂಗಳಷ್ಚು ಹಾಗೂ ಶೇ. 75ಕ್ಕೂ ಕಡಿಮೆ ಅಂಗವೈಕಲ್ಯತೆ ಹೊಂದಿರುವ ಅಂಗವಿಕಲರಿಗೆ  ನೀಡುತ್ತಿರುವ ಮಾಸಾಶನವನ್ನು 100ರೂಪಾಯಿ ಹೆಚ್ಚಿಸಲಾಗುವುದು. ಇದರಿಂದ  8.46 ಲಕ್ಷ ಅಂಗವಿಕಲರಿಗೆ ಅನುಕೂಲವಾಗಲಿದ್ದು  146 ಕೋಟಿ ರೂಪಾಯಿ  ಹೆಚ್ಚುವರಿಯಾಗಿ ಒದಗಿಸುವಿಕೆ.
  •  ಮಹಿಳೆಯರ ಬಗ್ಗೆ ಸಕಾರಾತ್ಮಕ ಮನೋಭಾವವನ್ನು ಮೂಡಿಸಲು ಮತ್ತು ಸುರಕ್ಷಿತ ವಾತಾವರಣವನ್ನು ಕಲ್ಪಿಸಲು ಸರ್ಕಾರಿ ಸಿಬ್ಬಂದಿಗಳಿಗೆ/  ಸಮುದಾಯ ಪೊಲೀಸ್ ಸ್ವಯಂ ಸೇವಕರು/ ರೆಸಿಡೆಂಟ್ ವೆಲ್‍ಫೇರ್ ಅಸೋಸಿಯೇಷನ್ /ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷವಾಗಿ ಬಾಲಕರಿಗೆ ಲಿಂಗತ್ವದ ಬಗ್ಗೆ ಅರಿವು ಮೂಡಿಸಲು  2 ಕೋಟಿ ರೂಪಾಯಿ, 
  • ಮಹಿಳೆಯರಿಗಾಗಿ ಸಮಗ್ರ ಮಾಹಿತಿ ಸಂಪನ್ಮೂಲ ಪೋರ್ಟಲ್ ಅನನ್ನು ಪ್ರಾರಂಭಿಸಿ, ಅವಶ್ಯಕ ಮಾಹಿತಿಗಳಾದ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು, ಸೌಲಭ್ಯಗಳು, ಸವಲತ್ತುಗಳ ಬಗ್ಗೆ  ಮಾಹಿತಿಯನ್ನು ನೀಡಲು  1 ಕೋಟಿ ರೂಪಾಯಿ, ಬೆಂಗಳೂರು ನಗರಕ್ಕೆ ಉದ್ಯೋಗ ಸಂದರ್ಶನ, ಪ್ರವೇಶ ಪರೀಕ್ಷೆ   ಇತ್ಯಾದಿಗಳಿಗೆ ಹಾಜರಾಗಲು ಬರುವ ಯುವತಿಯರಿಗೆ ಸ್ವಯಂ ಸೇವಾ ಸಂಸ್ಥೆಗಳ/ ಖಾಸಗಿ ಸಹಭಾಗಿತ್ವ ಸಹಾಯದೊಂದಿಗೆ  ಟ್ರಾನ್ಸಿಟ್ ಹಾಸ್ಟೆಲ್‍ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT