ಕುಮಾರ ಸ್ವಾಮಿ 
ರಾಜ್ಯ ಬಜೆಟ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 5,725 ಕೋಟಿ ರೂ: ಬಾಣಂತಿಯರಿಗೆ 1000 ರೂ. ಮಾಸಾಶನ

ಮುಖ್ಯಮಂತ್ರಿ ಮಾತೃಶ್ರೀ ಯೋಜನೆ”ಯನ್ನು ಹೊಸದಾಗಿ ರೂಪಿಸಿದ್ದು. ಈ ಹೊಸ ಯೋಜನೆಯಡಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಹೆರಿಗೆ ಪೂರ್ವದ 3 ...

ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್  ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು,  ಜಯಮಾಲಾ ಅವರು ನಿಭಾಯಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟು 5,725 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.
ರಾಜ್ಯ ಸರ್ಕಾರದ ‘ಮಾಥೃಪೂರ್ಣ’ ಮತ್ತು ಕೇಂದ್ರ ಸರ್ಕಾರದ ‘ಮಾತೃವಂದನಾ’ ಕಾರ್ಯಕ್ರಮಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತಿದ್ದು,ಇವುಗಳ ಜೊತೆಗೆ “ಮುಖ್ಯಮಂತ್ರಿ ಮಾತೃಶ್ರೀ ಯೋಜನೆ”ಯನ್ನು ಹೊಸದಾಗಿ ರೂಪಿಸಿದೆ. ಈ ಹೊಸ ಯೋಜನೆಯಡಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಹೆರಿಗೆ ಪೂರ್ವದ 3 ತಿಂಗಳು ಹಾಗೂ ಬಾಣಂತಿಯರಿಗೆ ಹೆರಿಗೆ ನಂತರದ 3 ತಿಂಗಳ ಕಾಲ ಮಾಸಿಕ 1,000 ರೂ. ಗಳನ್ನು ಅವರ ಆಧಾರ್ ಲಿಂಕ್ಡ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಈ ಮೊತ್ತವನ್ನು ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿಸಲಾಗುವುದು. ಈ ಯೋಜನೆಯು ತಾಯಿಯ ಮೊದಲ ಮಕ್ಕಳಿಗೆ ಅನ್ವಯವಾಗುತ್ತದೆ. ಈ ಯೋಜನೆಗೆ 350 ಕೋಡಿ ರೂ.ಗಳನ್ನು ಮೀಸಲಿಡಲಾಗಿದೆ. 2018ರ ನವೆಂಬರ್ 1ರಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಆಧಾರ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚವನ್ನು ಈಗಿರುವ 35,000 ರೂ. ಗಳಿಂದ 1 ಲಕ್ಷ ರೂ. ಗಳಿಗೆ ಹೆಚ್ಚಿಸಿ, ಇದರಲ್ಲಿ ಶೇ. 50ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಹಾಯಧನ ಒದಗಿಸಲು ಉದ್ದೇಶಿಸಲಾಗಿದೆ.  2016ರ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯು ಎಲ್ಲಾ 21 ವಿಧದ ವಿಕಲಚೇತನ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲು 5 ಕೋಟಿ ರೂ. ಅನುದಾನ ಒದಗಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT