ಎಚ್ ಡಿ ಕುಮಾರಸ್ವಾಮಿ 
ರಾಜ್ಯ ಬಜೆಟ್

ಬಜೆಟ್ ನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ 25 ಕೋಟಿ ರು. ಘೋಷಣೆ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ...

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಬಜೆಟ್ ನಲ್ಲಿ ಘೋಷಿಸಿದ್ದಾರೆ. 
ಮುಖ್ಯಮಂತ್ರಿಯಾಗಿ ಹಾಗೂ ಹಣಕಾಸು ಸಚಿವರಾಗಿ ಇಂದು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿ ಕುಮಾರಸ್ವಾಮಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ನೆರವು ನೀಡಬೇಕೆಂದು ಈ ಸಮುದಾಯದ ಬಹು ದಿನಗಳ ಬೇಡಿಕೆಯಾಗಿದೆ. ಹೀಗಾಗಿ ನಮ್ಮ ಸರ್ಕಾರವು ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಿದೆ. ಅಲ್ಲದೆ, ಇದಕ್ಕೆ 25 ಕೋಟಿ ರೂ.ಗಳನ್ನು ಒದಗಿಸಲಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಿಸುವುದಾಗಿಯೂ ಕುಮಾರಸ್ವಾಮಿ ತಿಳಿಸಿದ್ದಾರೆ. ಆದಿ ಶಂಕರಾಚಾರ್ಯರು ನಮ್ಮ ಧಾರ್ಮಿಕ ಪರಂಪರೆಯ ಮೇರು ವ್ಯಕ್ತಿಗಳಾಗಿದ್ದಾರೆ. ಇವರ ಗೌರವಾರ್ಥ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ವಿಶೇಷ ಸಂವಾದ! Video

ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸ್: ಶ್ರೀಲಂಕಾ XI ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟ ಸಿರಾಜ್; ಬ್ಯಾಟ್ ಪರೀಕ್ಷಿಸಿದ ಲಂಕನ್ನರು!

ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗಾಗಿ ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್, video!