ಬೆಂಗಳೂರು; 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರೂ.1 ಸಾವಿರ ಕೋಟಿಯನ್ನು ನಮ್ಮ ಮೆಟ್ರೋ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ.
ಸಂಚಾರ ದಟ್ಟಣೆ ಸಮಸ್ಯೆ ದೂರಾಗಿರುವ ಸಲುವಾಗಿ ನಮ್ಮ ಮೆಟ್ರೋ ಯೋಜನೆಯನ್ನು ಸರ್ಕಾರ ಕೈಗೊಂಡಿದ್ದು, ರೂ.2,13,734 ಕೋಟಿ ಬಜೆಟ್ ನಲ್ಲಿ ರೂ.1 ಸಾವಿರ ಕೋಟಿಯನ್ನು ನಮ್ಮ ಮೆಟ್ರೋ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ.
ಈಗಾಗಲೇ ನಮ್ಮ ಮೆಟ್ರೋ ಮೊದಲ 42.3 ಕಿಮೀ ಹಂತದ ಕಾಮಗಾರಿ ಮುಕ್ತಾಯವಾಗಿದ್ದು, ಆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಿದೆ. ಇನ್ನು ಎರಡನೇ ಹಂತದ ಕಾಮಗಾರಿ 2019ರಲ್ಲಿ ಮುಕ್ತಾಯಗೊಳ್ಳಲಿದೆ. ಇದೀಗ ಮೂರನೇ ಹಂತದ ಮೆಟ್ರೋ ವಿಸ್ತರಣೆಗೆ ರಾಜ್ಯ ಬಜೆಟ್ ನಲ್ಲಿ ಸಿಂಹಪಾಲನ್ನು ಬೆಂಗಳೂರಿಗೆ ಮೀಸಲಿರಿಸಲಾಗಿದೆ.
ನಮ್ಮ ಮೆಟ್ರೋ ಮೂರನೇ ಹಂತದಲ್ಲಿ ಜೆಪಿ ನಗರದಿಂದ ಕೆ.ಆರ್'ಪುರಂಗೆ 42 ಕಿಮೀ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.