ನವದೆಹಲಿ:ಸ್ಮಾರ್ಟ್ ಸಿಟಿ ಯೋಜನೆಯಡಿ 99 ನಗರಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಇವುಗಳಿಗೆ 2.4 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.
142 ನಗರಗಳು ಹೂಡಿಕೆ ಆಕರ್ಷಿಸುವ ನಗರಗಳ ಪಟ್ಟಿಯಲ್ಲಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 142018-19ರೊಳಗೆ 9 ಸಾವಿರ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ವಿಸ್ತರ್ಣ ಕಾರ್ಯ ಪೂರ್ಣಗೊಳ್ಳಲಿದೆ. ಮೂಲಸೌಕರ್ಯ ಅಭಿವೃದ್ದಿಗಾಗಿ 50 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಹೇಳಿದರು.
ಮುದ್ರಾ ಯೋಜನೆಯಡಿ 4.6 ಲಕ್ಷ ಕೋಟಿ ಸಾಲ ಒದಗಿಸಲಾಗಿದೆ. ಮುಂದಿನ ವರ್ಷ 3 ಲಕ್ಷ ಕೋಟಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಅರುಣ್ ಜೇಟ್ಲಿ ತಿಳಿಸಿದರು.