ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕ್ರಮವಾಗಿ 56,619 ಕೋಟಿ ರೂಪಾಯಿ ಮತ್ತು 39,135 ಕೋಟಿ ರೂಪಾಯಿಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಮಂಡಿಸಿರುವ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿಯ 279 ಕಾರ್ಯಕ್ರಮಗಳು ಮತ್ತು ಪರಿಶಿಷ್ಟ ಪಂಗಡದ 305 ಕಾರ್ಯಕ್ರಮಗಳಿಗೆ ಈ ಹಣವನ್ನು ಬಳಸಿಕೊಳ್ಳಲಾಗುತ್ತದೆ ಎಂದು ಜೇಟ್ಲಿ ತಿಳಿಸಿದರು.
2017-18ರ ಪರಿಷ್ಕ್ರಿತ ಅಂದಾಜಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಜನರ ಕಾರ್ಯಕ್ರಮಕ್ಕೆ 52,719 ಕೋಟಿ ರೂಪಾಯಿ ಮತ್ತು ಪರಿಶಿಷ್ಟ ಪಂಗಡದವರಿಗೆ 32,508 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿತ್ತು ಎಂದು ಜೇಟ್ಲಿ ಹೇಳಿದರು.