ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಸಿದ 2018ನೇ ಸಾಲಿನ ಬಜೆಟ್ ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೇವಲ 'ಬಾಯಿ ಮಾತಿ'ಗೆ ಸೀಮಿತವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರ ಮತ್ತು ಕೆಳ ವರ್ಷದವರ ಮೂಗಿಗೆ ತುಪ್ಪ ಸವರುವ ಯತ್ನ ಮಾಡಿದೆ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು ಹೇಳಿರುವುದಾಗಿ ಎನ್ಎನ್ಐ ವರದಿ ಮಾಡಿದೆ.
ಹಣಕಾಸಿನ ಬಲವರ್ಧನೆ ಪರೀಕ್ಷೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಹೇಳಿದ್ದಾರೆ.
ಈ ಬಾರಿ ಬಜೆಟ್ ನಲ್ಲಿ ರೈತರ ಬಗ್ಗೆ ಗಮನ ಹರಿಸಲಾಗಿದೆ. ಆದರೆ ಇದು ಸಾಕಾವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವರು ರೈತರ ಸುಧಾರಣೆ ಮಾಡುವ ಯತ್ನ ಮಾಡಿದ್ದಾರೆ. ರೈತರ ಮತ್ತು ಗಾಮೀಣ ಜನರ ಸಮಸ್ಯೆಗಳು ಅಪಾರ. ಹೀಗಾಗಿ ಈಗ ತೆಗೆದುಕೊಂಡಿರುವ ಕ್ರಮಗಳು ಸಾಕಾಗುವುದಿಲ್ಲ ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದಿ ಎನ್ ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ.