ನವದೆಹಲಿ:ಮುಂದಿನ ವರ್ಷದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ 1 ಸಾವಿರದ 400 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬದಾಲ್ ಹೇಳಿದ್ದಾರೆ.
ಆಹಾರ ಸಂಸ್ಕರಣಾ ಸಚಿವಾಲಯಕ್ಕೆ ಈ ಬಾರಿ ಹೆಚ್ಚಿನ ಹಣ ಮೀಸಲಿಟ್ಟಿರುವುದಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಹರ್ಸಿಮ್ರತ್ ಕೌರ್ ಬದಾಲ್ ಅಭಿನಂದನೆ ಸಲ್ಲಿಸಿದ್ದಾರೆ.
ಆಹಾರ ಸಂಸ್ಕರಣಾ ಸಂಬಂಧಿತ ಯೋಜನೆಗಳಿಂದ ಕೃಷಿಕರ ಆದಾಯ ದ್ವಿಗುಣಗೊಳ್ಳಲು ಸಾಧ್ಯವಿದೆ. ಇದರಿಂದ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ ನಿರ್ಧಾರವನ್ನು ಹರ್ಸಿಮ್ರತ್ ಕೌರ್ ಬದಾಲ್ ಸ್ವಾಗತಿಸಿದ್ದಾರೆ. ಇದರಿಂದ ಬೆಲೆ ಕುಸಿತ ಸಂದರ್ಭದಲ್ಲಿ ಬೆಳೆಗಳನ್ನು ಸಂರಕ್ಷಿಸಲು ಸಾಧ್ಯವಾಗಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.