ನವದೆಹಲಿ: ಕ್ರಿಪ್ಟೊಕರೆನ್ಸಿಗಳನ್ನು ಕಾನೂನುಬದ್ಧ ಎಂದು ಸರ್ಕಾರ ಪರಿಗಣಿಸುವುದಿಲ್ಲ ಮತ್ತು ನ್ಯಾಯಸಮ್ಮತವಲ್ಲದ ಚಟುವಟಿಕೆಗಳಿಗೆ ಕ್ರಿಪ್ಟೊಕರೆನ್ಸಿಗಳನ್ನು ಬಳಸುವುದನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವ ಅರುಣ್ ಜೇಟ್ಲಿ ಒತ್ತಿ ಹೇಳಿದ್ದಾರೆ.
ಭಾರತದಲ್ಲಿ ಕ್ರಿಪ್ಟೊಕರೆನ್ಸಿಗಳನ್ನು ಹೂಡಿಕೆ ಮಾಡುವವರು ಗಮನದಲ್ಲಿಟ್ಟುಕೊಳ್ಳಬೇಕಾದ ಮುಖ್ಯ ವಿಷಯವೆಂದರೆ ಸರ್ಕಾರ ಅದನ್ನು ಕಾನೂನುಬದ್ಧವೆಂದು ಪರಿಗಣಿಸುವುದಿಲ್ಲ ಎಂದು ಹೇಳಿದರು.
ಹೂಡಿಕೆಯನ್ನು ಬಿಟ್ಟು, ಅಕ್ರಮ ಚಟುವಟಿಕೆಗಳಿಗೆ ಕ್ರಿಪ್ಟೊಕರೆನ್ಸಿಗಳನ್ನು ಬಳಸುವುದನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಾರಿದರು.