ಸಾಂದರ್ಭಿಕ ಚಿತ್ರ 
ಕೇಂದ್ರ ಬಜೆಟ್

ಫೆಬ್ರವರಿ 1ರ ಮಧ್ಯಂತರ ಬಜೆಟ್: ಸರ್ಕಾರದಿಂದ ಆದಾಯ ತೆರಿಗೆ ವಿನಾಯ್ತಿ ನಿರೀಕ್ಷೆ

ಲೋಕಸಭೆ ಚುನಾವಣೆಗೆ ಇನ್ನು ಇರುವುದು ಕೇವಲ ಮೂರು ತಿಂಗಳು. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ....

ನವದೆಹಲಿ: ಲೋಕಸಭೆ ಚುನಾವಣೆಗೆ ಇನ್ನು ಇರುವುದು ಕೇವಲ ಮೂರು ತಿಂಗಳು. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಮಧ್ಯಂತರ ಬಜೆಟ್ ಮೇಲೆಯೇ ಎಲ್ಲರ ಕಣ್ಣು. ಚುನಾವಣೆ ಹೊಸ್ತಿಲಲ್ಲಿ ಇದು ಸಾಮಾನ್ಯವಾಗಿ ಮತದಾರರನ್ನು ಓಲೈಕೆ ಮಾಡುವ ಬಜೆಟ್ ಆಗಿರುತ್ತದೆ.

ಮಧ್ಯಮ ವರ್ಗದ ವೇತನದಾರ ಮತದಾರರನ್ನು ಸೆಳೆಯಲು ಮೋದಿ ನೇತೃತ್ವದ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ ನೀಡುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಚುನಾವಣೆ ಹೊಸ್ತಿಲಿನಲ್ಲಿರುವಾಗ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುತ್ತದೆಂದು ಸರ್ಕಾರಗಳು ಮಧ್ಯಂತರ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ ಘೋಷಿಸುವುದಿಲ್ಲ. ಆದರೆ ಅರುಣ್ ಜೇಟ್ಲಿಯವರು ಮಂಡಿಸುತ್ತಿರುವ ಫೆಬ್ರವರಿ 1ರ ಮಧ್ಯಂತರ ಬಜೆಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದಿಲ್ಲ. ಹೀಗಾಗಿ ಮತದಾರರನ್ನು ಗಮನದಲ್ಲಿಟ್ಟುಕೊಂಡು, ವೇತನ ವರ್ಗದವರಿಗೆ ಹೆಚ್ಚಿನ ಆದಾಯ ತೆರಿಗೆ ವಿನಾಯ್ತಿಯನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವೋಟ್ ಆನ್ ಅಕೌಂಟ್ ಗೆ ಅನುಮತಿ ಕೇಳುವ ಸಾಧ್ಯತೆಯಿದೆ. ಅಂದರೆ ಹಣದ ವೆಚ್ಚಕ್ಕೆ ಸರ್ಕಾರಕ್ಕೆ ಸಂಸತ್ತು ಮಧ್ಯಂತರ ಅನುಮತಿ ನೀಡುವುದು. ಪೂರ್ಣ ಪ್ರಮಾಣದ ಬಜೆಟ್ ಗೆ ಬದಲಾಗಿ ಸರ್ಕಾರದ ನೀತಿಗಳು, ಯೋಜನೆಗಳು ಮತ್ತು ತೆರಿಗೆಗಳಿಗೆ ಹಣ ಖರ್ಚು ಮಾಡಲು ಪಡೆಯುವ ಮಧ್ಯಂತರ ಅನುಮತಿಯಾಗಿದೆ. ಇದು ಕೇವಲ 2 ತಿಂಗಳ ಮೌಲ್ಯವನ್ನು ಹೊಂದಿರುತ್ತದೆ.

ಬಜೆಟ್ ಗೆ ಮುನ್ನ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿರುವ ಕೈಗಾರಿಕಾ ಮಂಡಳಿ, 5 ಲಕ್ಷದವರೆಗೆ, 80ಸಿಯಡಿ ಕಡಿತ ಮಿತಿಯನ್ನು ಹೆಚ್ಚಿಸಿ 2.5 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿಯನ್ನು ನೀಡಿ ಉಳಿತಾಯವನ್ನು ಹೆಚ್ಚಿಸಬೇಕೆಂದು ಕೋರಿದೆ.

ಮಧ್ಯಂತರ ಬಜೆಟ್ ನ ಅವಧಿ ಕೇವಲ 4 ತಿಂಗಳು ಇರುವುದರಿಂದ ನೂತನ ಸರ್ಕಾರ ಜುಲೈಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಸರ್ಕಾರದ ಆರ್ಥಿಕ ಸಮೀಕ್ಷೆ ಕೂಡ ಅಂದೇ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT