ಬೆಂಗಳೂರು: ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಮುದ್ರಾ ಸಾಲದಿಂದ ಯಾವುದೇ ಪ್ರಯೋಜನವಿಲ್ಲ, ಮಹಿಳೆಯರಿಗೆ ಇದು ಹೆಚ್ಚುವರಿ ಹೊರೆಯಾಗುತ್ತದೆ ಎಂದು ಮಹಿಳಾ ಕಾರ್ಯಕರ್ತರು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ 30 ಸಾವಿರ ಗ್ರಾಮಗಳ ಲಕ್ಷಾಂತರ ಮಹಿಳೆಯರು ಸ್ವಸಹಾಯ ಗುಂಪುಗಳಲ್ಲಿದ್ದಾರೆ, ಸ್ವಸಹಾಯ ಗುಂಪುಗಳಿಂದ ಪಡೆಯುವ ಸಾಲದ ಹಣವನ್ನು ಮಹಿಳೆಯರು ಕುಟುಂಬ ನಿರ್ವಹಣೆಗಾಗಿ ಬಳಸಿಕೊಳ್ಳುತ್ತಾರೆ. ಹೀಗಾಗಿ ಅವರು ವಾಪಸ್ ನೀಡಲು ಸಾಧ್ಯವಾಗುವುದಿಲ್ಲ, ಅದರಿಂದ ಮಹಿಳೆಯರಿಗೆ ಹೊರೆಯಾಗುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಬೃಂದಾ ಅಡಿಗೆ ಹೇಳಿದ್ದಾರೆ.
ಹಣ ನೀಡುವ ಬದಲು ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಅಸೋಸಿಯೇಷನ್ ಕೆಎಸ್ ವಿಮಲಾಹೇಳಿದ್ದಾರೆ.