ಸಿಲಿಕಾನ್ ಸಿಟಿ ಬೆಂಗಳೂರು 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೀಸಲಿಟ್ಟ ಯೋಜನೆಗಳು

ಕರ್ನಾಟಕ ಬಜೆಟ್ 2020ರಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ತರ ಘೋಷಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಬಜೆಟ್ 2020ರಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ತರ ಘೋಷಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಬಜೆಟ್ ಮಂಡನೆಯಲ್ಲಿ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, 'ಪರಿಣಾಮಕಾರಿ ಆಡಳಿತ ಹಾಗೂ ನಾಗರಿಕ ಸೇವೆಗಳನ್ನು ನೀಡಲು, ಬೆಂಗಳೂರು ನಗರಕ್ಕೆ ಸೀಮಿತವಾಗಿ, ಪ್ರತ್ಯೇಕ ಪೌರನಿಗಮ ಕಾಯ್ದೆ ರಚನೆ ಮಾಡಲಾಗುತ್ತದೆ ಎಂದು ಹೇಳಿದರು. ಅಂತೆಯೇ ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಉಳಿದಂತೆ ಉದ್ಯಾನನಗರಿಗೆ ಘೋಷಣೆ ಮಾಡಲಾದ ಯೋಜನೆಗಳ ಪಟ್ಟಿ ಇಂತಿದೆ.
-ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣೆಗೆ “ಶುಭ್ರ ಬೆಂಗಳೂರು” ಯೋಜನೆಯಡಿ 999 ಕೋಟಿ ರೂ. ಅನುದಾನದ ಕ್ರಿಯಾಯೋಜನೆ ಅನುಷ್ಠಾನ.
-ಬೆಂಗಳೂರು ನಗರದ ಕೆರೆಗಳ ಸರ್ವತೋಮುಖ ಅಭಿವೃದ್ಧಿಗೆ ಶುಭ್ರ ಬೆಂಗಳೂರು ಹಾಗೂ ಮುಖ್ಯಮಂತ್ರಿಗಳ ನವ ನಗರೋತ್ಥಾನ ಕ್ರಿಯಾ ಯೋಜನೆಗಳಡಿ ಒಟ್ಟು 417 ಕೋಟಿ ರೂ. ನಿಗದಿ.
-ಬೆಂಗಳೂರು ನಗರದ ಬೃಹತ್ ನೀರುಗಾಲುವೆಗಳ ಜಾಲದಲ್ಲಿರುವ ಕೊರತೆಗಳನ್ನು (Missing gap) ಅಭಿವೃದ್ಧಿ ಕಾಮಗಾರಿಗೆ 200 ಕೋಟಿ ರೂ. ಅನುದಾನ.
-ಬೆಂಗಳೂರು ನಗರಕ್ಕೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ದುಃಸ್ಥಿತಿಯಲ್ಲಿರುವ ರಸ್ತೆಗಳ ಪುನಶ್ಚೇತನಕ್ಕೆ ಮುಂದಿನ ಎರಡು ವರ್ಷಗಳಿಗೆ 1000 ಕೋಟಿ ರೂ. ಅನುದಾನ.
-ಕರ್ನಾಟಕ ವಿದ್ಯುತ್ ನಿಗಮದಿಂದ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ 210 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಬೇರ್ಪಡಿಸಿದ ತ್ಯಾಜ್ಯ ಬಳಸಿಕೊಂಡು 11.5 ಮೆಗಾ ವ್ಯಾಟ್ ಸಾಮಥ್ರ್ಯದ ಹೊಸ “Waste to Energy” (ತ್ಯಾಜ್ಯದಿಂದ ವಿದ್ಯುತ್) ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆ. ವಾರ್ಷಿಕ 70 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಗುರಿ. “ಬೆಂಗಳೂರು ಸ್ಮಾರ್ಟ್ ಸಿಟಿ” ಯೋಜನೆಯಡಿ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ವಿಶ್ರಾಂತಿ ಕೋಣೆಗಳ ಸೌಲಭ್ಯ.
-ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಲ್ಕು ವಿದ್ಯುತ್ ಚಿತಾಗಾರಗಳ ಸ್ಥಾಪನೆ.
-ನಮ್ಮ ಮೆಟ್ರೊ ಯೋಜನೆಯಡಿ ಮೈಸೂರು ರಸ್ತೆಯಲ್ಲಿ ಕೆಂಗೇರಿಯವರೆಗೆ ಮತ್ತು ಕನಕಪುರ ರಸ್ತೆಯಲ್ಲಿ ಅಂಜನಾಪುರ  ಟೌನ್‍ಷಿಪ್ ವರೆಗೆ ಒಟ್ಟು 12.8 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಿ, 2020 ರಲ್ಲಿ ಸೇವೆ ಒದಗಿಸಲು ಕ್ರಮ.
-ಮೆಟ್ರೋ ಪ್ರಯಾಣಿಕರಲ್ಲದ ಪಾದಚಾರಿಗಳಿಗೆ 24 ಮೆಟ್ರೋ ನಿಲ್ದಾಣಗಳ ಮೂಲಕ ಮೇಲ್ಸೇತುವೆ ಸೌಲಭ್ಯ. 
-ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 14,500 ಕೋಟಿ ರೂ. ಅಂದಾಜು ವೆಚ್ಚದಲ್ಲಿ 56 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆ – ಏರ್‍ಪೋರ್ಟ್ ಮೆಟ್ರೋ ನಿರ್ಮಾಣ ಪ್ರಾರಂಭ.
-ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 44 ಕಿ.ಮೀ. ಹೊಸ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ.
-ಸಬ್-ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಅನುದಾನ.
-ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ಜೋಡಿ ರೈಲು ಮಾರ್ಗ ಯೋಜನೆಯ ಶೇ. 50 ರಷ್ಟು ವೆಚ್ಚ ಭರಿಸಲು ರಾಜ್ಯದ ನಿರ್ಧಾರ.
-ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು ಮೂಲಸೌಲಭ್ಯ, ಟ್ರಾನ್ಸಿಟ್ ಆಧಾರಿತ ಬೆಳವಣಿಗೆ ಹಾಗೂ ಇತರ ಅಗತ್ಯ ನಿಯಂತ್ರಣಾ ಕ್ರಮಗಳಿಗೆ ಆದ್ಯತೆ.
-ಹೆಬ್ಬಾಳ, ಸಿಲ್ಕ್ ಬೋರ್ಡ್ ಹಾಗೂ ಕೆ.ಆರ್.ಪುರಂ ಜಂಕ್ಷನ್‍ಗಳಲ್ಲಿ ಸಂಚಾರ ಸಾಮಥ್ರ್ಯ ಹೆಚ್ಚಳಕ್ಕೆ ಕ್ರಮ.
-ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಾಹನ ದಟ್ಟಣೆ ಇರುವ ರಸ್ತೆಗಳ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ.
-ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಸಮರ್ಪಕ ಮೆಟ್ರೋ ಫೀಡರ್ ಸಾರಿಗೆ ಸೌಲಭ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ 890 ಎಲೆಕ್ಟ್ರಿಕ್ ಬಸ್‍ಗಳೂ ಸೇರಿದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2390 ಹೊಸ ಬಸ್‍ಗಳ ಸೇರ್ಪಡೆ.
-ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗೆ “ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ” ಯೋಜನೆ
-ಸಂಚಾರ ದಟ್ಟಣೆಯ 12 ಕಾರಿಡಾರ್‍ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಅನುಷ್ಠಾನ.
-ರಸ್ತೆ ಸುರಕ್ಷತಾ ಚಟುವಟಿಕೆ ಕೈಗೊಳ್ಳುವ ರಸ್ತೆ ಸುರಕ್ಷತಾ ನಿಧಿಗೆ 200 ಕೋಟಿ ರೂ. ಅನುದಾನ.
-ಪ್ರಯಾಣಿಕ ಮತ್ತು ಸರಕು ಸಾಗಣೆ ವಾಹನಗಳಿಗೆ 20 ಕೋಟಿ ರೂ. ವೆಚ್ಚದಲ್ಲಿ Vehicle Location Tracking ವ್ಯವಸ್ಥೆ ಅಳವಡಿಕೆ.
-ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ನಗರದ ಹೊರವಲಯದಲ್ಲಿ‘Integrated Multi Modal Transport Hub’  ಅಭಿವೃದ್ಧಿ ಕುರಿತು ಕಾರ್ಯಾಧ್ಯಯನ
-ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ‘ಅಂಡರ್‍ಗ್ರೌಂಡ್ ವಾಹನ ಪಾರ್ಕಿಂಗ್’ ಯೋಜನೆ ಜಾರಿ.
-ಬೆಂಗಳೂರು ನಗರದಲ್ಲಿರುವ ಎಲ್ಲಾ ಗ್ರಾಹಕರಿಗೆ ಅತೀ ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸಲು ಆಪ್ಟಿಕಲ್ ಫೈಬರ್ ಅಳವಡಿಕೆ.
-ಸೆಪ್ಟೆಂಬರ್ 2021ರ ಅಂತ್ಯಕ್ಕೆ ಟಿ.ಜಿ.ಹಳ್ಳಿ ನೀರಿನ ಮೂಲದ ಪುನರುಜ್ಜೀವನ ಯೋಜನೆ ಪೂರ್ಣ
-ಬೆಂಗಳೂರು ಜಲಮಂಡಲಿಯ ತ್ಯಾಜ್ಯ ನೀರು ಸಂಸ್ಕರಣೆಯ ಸಾಮಥ್ರ್ಯವು 2020-21ನೇ ಸಾಲಿನ ಅಂತ್ಯಕ್ಕೆ 1587 ದಶಲಕ್ಷ ಲೀಟರ್‍ಗೆ ಹೆಚ್ಚಿಸಲು ಕ್ರಮ. ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ನವೀಕರಣಕ್ಕೆ 1000 ಕೋಟಿ ರೂ. ಅನುದಾನ.
-ಕಾವೇರಿ ನೀರು ಸರಬರಾಜು ಐದನೇ ಹಂತದ ಯೋಜನೆ 5550 ಕೋಟಿ ರೂ. ವೆಚ್ಚದಲ್ಲಿ 2023ರ ಅಂತ್ಯಕ್ಕೆ ಪೂರ್ಣ
-ಬೆಂಗಳೂರು ಅಭಿವೃದ್ಧಿ ವಲಯಕ್ಕೆ ಒಟ್ಟಾರೆಯಾಗಿ ಒದಗಿಸಿರುವ ಮೊತ್ತ 8,772 ಕೋಟಿ ರೂ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT