ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ

Srinivasamurthy VN

ಬೆಂಗಳೂರು: ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.32 ರಿಂದ ಶೇ.35ಕ್ಕೆ ಏರಿಕೆ ಮಾಡಿದ್ದು, ಡೀಸೆಲ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.21ರಿಂದ 24ಕ್ಕೆ ಏರಿಕೆ ಮಾಡಿದ್ದಾರೆ.

ಅದರಂತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1.60ರೂ  ದರ ಮತ್ತು ಡೀಸೆಲ್ ದರದಲ್ಲಿ 1.59 ರೂ ಹೆಚ್ಚಳವಾಗಲಿದೆ. 

SCROLL FOR NEXT