ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2020: 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ 'ಭಾರತ್ ನೆಟ್'

Srinivasamurthy VN

ನವದೆಹಲಿ: 2020ನೇ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸೇವೆ ಕಲ್ಪಿಸುವ 'ಭಾರತ್ ನೆಟ್' ಯೋಜನೆ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ನಿರ್ಮಲಾ ಅವರು, 'ಹೊಸ ಆರ್ಥಿಕ ವ್ಯವಸ್ಥೆ ಬರುತ್ತಿರುವುದರಿಂದ ಸಾಂಪ್ರದಾಯಿಕ ವ್ಯವಸ್ಥೆ ಅಲುಗಾಡುತ್ತಿದೆ. ದತ್ತಾಂಶ ವಿಶ್ಲೇಷಣೆ ಮತ್ತು ಇಂಟರ್ನೆಟ್‌ ಬಳಕೆ ನಮ್ಮ ಬದುಕುಗಳನ್ನು ಬದಲಿಸುತ್ತಿದೆ. ಖಾಸಗಿ ಕ್ಷೇತ್ರಗಳು ದೇಶದಾದ್ಯಂತ ಡೇಟಾ ಸೆಂಟರ್‌ ಪಾರ್ಕ್ ರೂಪಿಸಲು ನೀತಿಯೊಂದನ್ನು ರೂಪಿಸುತ್ತೇವೆ ಎಂದು ಹೇಳಿದರು.

ಅಂತೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಚೆ ಕಚೇರಿಯಿಂದ ಪೊಲೀಸ್‌ ವ್ಯವಸ್ಥೆಯವರೆಗೆ ಎಲ್ಲ ಸೇವೆಗಳು ಡಿಜಿಟಲೀಕರಣಗೊಳ್ಳಲಿದೆ. ದೇಶದ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಭಾರತ್ ನೆಟ್ ಕಾರ್ಯಕ್ರಮದ ಮೂಲಕ ಒಎಫ್‌ಸಿ ಸಂಪರ್ಕ ಒದಗಿಸಲಾಗುವುದು. ಕ್ವಾಂಟಮ್‌ ತಂತ್ರಜ್ಞಾನ ಅಭಿವೃದ್ಧಿಗಾಗಿ  8,000 ಕೋಟಿ ರೂ ಮೀಸಲಿಡುವುದಾಗಿ ಮತ್ತು ಅಂಗನವಾಡಿಗಳಿಗೆ ಇಂಟರ್ನೆಟ್‌ ಸಂಪರ್ಕ ಕಲ್ಪಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದರು.

SCROLL FOR NEXT