ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

'ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಕೂಡ': ಪಂಪ್‌ ಸೆಟ್‌ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ!

ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್‌ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ: ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್‌ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಸಂಸತ್ ನಲ್ಲಿ ಇಂದು 2020ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಯನ್ನು ಘೋಷಣೆ ಮಾಡಿದರು. ಈ ವೇಳೆ 'ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ ಎಂದು ಹೇಳಿದ ನಿರ್ಮಲಾ ಸೀತಾರಾಮನ್ ಅವರು, ಪಂಪ್‌ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಅಂತೆಯೇ ರೈತರು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್‌ ಅನ್ನು ಗ್ರಿಡ್ ಮೂಲಕ ಸರ್ಕಾರವೇ ಖರೀದಿಸಲಿದೆ. ಈ ಮೂಲಕ ಬರಡು ಭೂಮಿಯಲ್ಲಿಯೂ ರೈತರು ಹಣ ಗಳಿಸಬಹುದು ಎಂದು ಹೇಳಿದರು.

'ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದೊಂದಿಗೆ ಸರ್ಕಾರ ಕೆಲಸ ಮಾಡಿತು. ಮಧ್ಯವರ್ತಿಗಳ ಹಿಡಿತದಿಂದ ರೈತರನ್ನು ಬಿಡುಗಡೆ ಮಾಡಿ, ಮಾರುಕಟ್ಟೆ ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದೆವು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನಾ ಸೇರಿದಂತೆ ಹಲವು ಯೋಜನೆಗಳ ಮೂಲಕ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಪ್ರಯತ್ನಿಸಿದೆವು. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮಾದರಿ ಕಾನೂನುಗಳನ್ನು ಜಾರಿ ಮಾಡುವ ರಾಜ್ಯ ಸರ್ಕಾರಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!