2021 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಸುತ್ತಮುತ್ತ ಇರುವ ಪ್ರವಾಸಿ ತಾಣಗಳನ್ನೊಳಗೊಂಡ ವಾರಾಂತ್ಯ ಪ್ರವಾಸ ವೃತ್ತದ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಬಜೆಟ್ ನಲ್ಲಿ ಮಂಡನೆ ವೇಳೆ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಿ, ಪ್ರವಾಸಿಗರನ್ನು ಆಕರ್ಷಿಸಲು ಬಜೆಟ್ ನಲ್ಲಿ ಘೋಷಣೆಯಾದ ಅಂಶಗಳ ವಿವರ ಹೀಗಿದೆ.
- ಕಾವೇರಿ ನೀರಾವರಿ ನಿಗಮದ ವತಿಯಿಂದ ಮೈಸೂರಿನ ಕಬಿನಿ ಅಣೆಕಟ್ಟಿನ ಕೆಳಭಾಗದಲ್ಲಿ ಉದ್ಯಾನವನ ಅಭಿವೃದ್ಧಿಗೆ 50 ಕೋಟಿ ರೂಪಾಯಿ
- 10 ಕೋಟಿ ರೂಪಾಯಿ ವೆಚ್ಚದಲ್ಲಿ ಉಡುಪಿಯ ತ್ರಾಸಿ, ಮರವಂತೆ, ಒತ್ತಿನೆಣೆಗಳೂ ಸೇರಿ ಇತರ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಕೆ
- 10 ಕೋಟಿ ರೂಪಾಯಿಗಳಲ್ಲಿ ಉಡುಪಿಯ ಬೈಂದೂರಿನಲ್ಲಿರುವ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ
- ನಂದಿ ಗಿರಿಧಾಮ ಮತ್ತು ಕೆಮ್ಮಣ್ಣುಗುಂಡಿ ಗಿರಿಧಾಮಗಳ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ
- ನವಶಿಲಾಯುಗದಿಂದ ಕಬ್ಬಿಣ ಯುಗದ ತಾಣ ಕುಡುತಿನಿ ಆಶ್ ಮೌಂಟ್ (ಬೂದಿ ದಿಬ್ಬ) ಅಭಿವೃದ್ಧಿಗೆ 5 ಕೋಟಿ ರೂಪಾಯಿ, ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂಪಾಯಿ ಅನುದಾನ ಘೋಷಣೆ
- ಚಾಮರಾಜನಗರದ ಗೋಪಿನಾಥಂ ಪ್ರದೇಶದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ವನ್ಯಜೀವಿ ಸಫಾರಿಯನ್ನೊಳಗೊಂಡ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ
- ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos