ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳ ಘೋಷಣೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿನ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವುದಾಗಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಹಾಗೂ 100 ತಾಲ್ಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆ ಸಾಮರ್ಥ್ಯದ ಐಸಿಯು ಘಟಕಗಳನ್ನು 60 ಕೋಟಿ ರೂ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ 50 ಹಾಸಿಗೆ ಸಾಮರ್ಥ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ 50 ಕೋಟಿ ರೂ ಮೀಸಲಿಡಲಾಗುವುದು. ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭಿಸುವುದನ್ನು ಪ್ರಕಟಿಸಲಾಗಿದೆ.

ರಾಜ್ಯದ ನಾಲ್ಕು ವಿಭಾಗಗಳಲ್ಲಿ ಒಟ್ಟು 2.5 ಕೋಟಿ ರೂ ವೆಚ್ಚದಲ್ಲಿ 'ತಾಯಂದಿರ ಎದೆಹಾಲಿನ ಬ್ಯಾಂಕ್' ಸ್ಥಾಪನೆ. ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ. ವೆಚ್ಚದಲ್ಲಿ 'ಚಿಗುರು' ಕಾರ್ಯಕ್ರಮಕ್ಕೆ ಚಾಲನೆ. ಟೆಲಿ-ಐಸಿಯು ಬಲಪಡಿಸಲು 2 ಕೋಟಿ ರೂ ಅನುದಾನ ನೀಡಲಾಗುವುದು.

ಅಪೌಷ್ಟಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ 'ಪೋಷಣೆ ಮತ್ತು ಜೀವನೋಪಾಯ' ಕಾರ್ಯಕ್ರಮ ಜಾರಿ ಮಾಡಲಾಗುವುದು. ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ ವೆಚ್ಚದಲ್ಲಿ ತುರ್ತು ವಿಭಾಗ ಪ್ರಾರಂಭ. ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭಿಸಲಾಗುವುದು.

ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ. ಮಹಿಳೆಯರಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚಲು 11 ಕೋಟಿ ರೂ ಗಳ ವೆಚ್ಚದಲ್ಲಿ ಹೊಸ ಸುಸಜ್ಜಿತ ಸಂಚಾರಿ ಪ್ರಯೋಗಾಲಯ ಪ್ರಾರಂಭಿಸಲಾಗುವುದು. ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ಪ್ರಾರಂಭಿಸಲಾಗುವುದು.

ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ. ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.

ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ. ಬುದ್ಧಿಮಾಂದ್ಯರ ಆರೈಕೆ ಮಾಡಲು ಅನುಕೂಲವಾಗುವಂತೆ ಶೇ.75 ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿದವರಿಗೆ ನೀಡುವ ಮಾಸಾಶನ 200 ರೂ.ಗಳಿಗೆ ಹೆಚ್ಚಳ. ಹುಟ್ಟಿನಿಂದಲೇ ಶ್ರವಣದೋಷವುಳ್ಳ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಬ್ರೈಲ್ ಮುದ್ರಣಾಲಯದಲ್ಲಿ "ಸುಶ್ರಾವ್ಯ" ಡಿಜಿಟಲ್ ಪುಸ್ತಕಗಳ ಬ್ಯಾಂಕ್ ಸ್ಥಾಪನೆ; ವಿಶೇಷ ಶಾಲೆಗಳಿಗೆ ಡಿಜಿಟಲ್ ಪುಸ್ತಕ ಸರಬರಾಜಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT