ರಾಜ್ಯ ಬಜೆಟ್

ರಾಜ್ಯ ಬಜೆಟ್ 2021-2022: ಧಾರ್ಮಿಕ, ಮಠಗಳ ಅಭಿವೃದ್ಧಿಗಳಿಗೆ ಸಿಕ್ಕಿದೆಷ್ಟು?

Manjula VN

ಬೆಂಗಳೂರು: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ,

ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು, ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ರೂ. 200 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ರೂ.500 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ ರೂ.200 ಕೋಟಿ ಹಾಗೂ ಅಲ್ಪಸಂಖ್ಯಾತರಿಗೆ 1,500 ಕೋಟಿ ರೂಪಾಯಿ ಮೀಸಲು ಇರಿಸಲಾಗುವುದು. ಅಂತೆಯೇ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, ನಿಗಮದ ಚಟುವಟಿಕೆಗೆ 500 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ರೂ. 10 ಕೋಟಿ, ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ ಮೀಸಲಿಡಲಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಲಾಗುತ್ತಿದ್ದು, ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ ರೂ. 5 ಕೋಟಿ, ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ ರೂ. 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

SCROLL FOR NEXT