ಬಿಎಸ್ ವೈ ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?
ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ...
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಜನವರಿ ಅಂತ್ಯಕ್ಕೆ 4,294 ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿದೆ.
2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್ ನಿಲ್ದಾಣ, 16 ಬಸ್ ಘಟಕಗಳ ನಿರ್ಮಾಣಕ್ಕೆ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿದೆ.
ಸಿಎಂ ಯಡಿಯೂರಪ್ಪ ಅವರು ಮಹಿಳೆಯರಿಗೆ ಬಿಎಂಟಿಸಿ ಬಸ್ಪಾಸ್ನಲ್ಲಿ ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.