ಪ್ರಧಾನಿ ನರೇಂದ್ರ ಮೋದಿ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2021: ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಲಿದೆ- ಪ್ರಧಾನಿ ನರೇಂದ್ರ ಮೋದಿ

ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್, ಸ್ವಾವಲಂಬನೆ ದೃಷ್ಟಿ ಹೊಂದಿದ್ದು, ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್, ಸ್ವಾವಲಂಬನೆ ದೃಷ್ಟಿ ಹೊಂದಿದ್ದು, ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್ ಮಂಡನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಬೆಳವಣಿಗಾಗಿ ಹೊಸ ಅವಕಾಶಗಳ ವಿಸ್ತರಣೆ, ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿ, ಮೂಲ ಸೌಕರ್ಯಕ್ಕಾಗಿ ಹೊಸ ವಲಯಗಳ ಅಭಿವೃದ್ಧಿ, ತಂತ್ರಜ್ಞಾನ ಪ್ರಗತಿ ಕಡೆಗೆ ಗಮನ ಹರಿಸಲಾಗಿದ್ದು, ಈ ಬಜೆಟ್ ನಲ್ಲಿ ಹೊಸ ಸುಧಾರಣೆ ತರಲಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಗುಣಗಾನ ಮಾಡಿದರು. ಹೂಡಿಕೆ, ಉದ್ಯಮ ಮತ್ತು ಮೂಲ ಸೌಕರ್ಯ ವಲಯಗಳಲ್ಲಿ ಬಜೆಟ್ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದ್ದು, ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡವನ್ನು ಅಭಿನಂದಿಸುವುದಾಗಿ ಪ್ರಧಾನಿ ಹೇಳಿದರು.

ಜನಸಾಮಾನ್ಯರಿಗೆ ತೆರಿಗೆ ಹೊರೆಯಾಗದಂತೆ ಅನೇಕ ರೀತಿಯಲ್ಲಿ ಪ್ರಯತ್ನಿಸಲಾಗಿದೆ. ಆದಾಗ್ಯೂ, ಪಾರದರ್ಶಕ ರೀತಿಯ ಬಜೆಟ್ ಕಡೆಗೆ ಗಮನ ಹರಿಸಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರು ಸುಲಭವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಕೃಷಿ ಮೂಲಸೌಕರ್ಯ ನಿಧಿ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಸದೃಢಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೂಲಸೌಕರ್ಯ ಹಾಗೂ ಎಂಎಸ್ ಎಂಇ ವಲಯಗಳ ಕಡೆಗೆ ವಿಶೇಷ ಗಮನ ಹರಿಸಲಾಗಿದೆ. ಮಹಿಳೆಯರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT