ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2021-2022: ಬೆಂಗಳೂರು ನಮ್ಮ ಮೆಟ್ರೋಗೆ ರೂ.14,788 ಕೋಟಿ ಅನುದಾನ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಲ್ಲಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಲ್ಲಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್ ಅವರು ಕ್ಷೇತ್ರವಾರು ಅನುದಾನದ ವಿವರಗಳನ್ನು ನೀಡುತ್ತಿದ್ದಾರೆ. ಈ ಪೈಕಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ.

ರೈಲ್ವೇ ಬಜೆಟ್'ಗೆ ವಿಶೇಶ ಅನುದಾನ ನೀಡಿರುವ ಸೀತಾರಾಮ್ ಅವರು ರೈಲ್ವೇ ಮಿಷನ್ 2030 ಯೋಜನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಚ್ಚಿನ ಅನುದಾನ ಘೋಷಣೆ ಮಾಡಿದ್ದಾರೆ.

ಭವಿಷ್ಯಕ್ಕೆ ಸಿದ್ಧವಾಗಿರುವ ರೈಲ್ವೆ ವ್ಯವಸ್ಥೆಯನ್ನು ನಾವು ರೂಪಿಸುತ್ತೇವೆ. ಜೂನ್ 2022ರ ಒಳಗೆ ಎರಡು ಕಾರಿಡಾರ್ ಪೂರ್ಣಗೊಳಿಸುತ್ತೇವೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೆಲ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ.

ನಾಲ್ಕು ಹೊಸ ರೈಲ್ವೆ ಕಾರಿಡಾರ್ ಯೋಜನೆಗಳ ಘೋಷಣೆ ಮಾಡಲಾಗಿದ್ದು, ಈ ವರ್ಷ 46,000 ಕಿ.ಮೀ. ಬ್ರಾಡ್​ಗೇಜ್​ ಹಳಿ ಪರಿವರ್ತನೆ ಮಾಡಲಾಗುತ್ತದೆ. 2023ರ ಡಿಸೆಂಬರ್ ಒಳಗೆ ಎಲ್ಲ ಬ್ರಾಡ್​ಗೇಜ್ ಹಳಿಗಳ ವಿದ್ಯುದೀಕರಣ ಪೂರ್ಣಗೊಳಿಸಿ, ಹೆಚ್ಚು ಬೇಡಿಕೆಯಲ್ಲಿರುವ ಮತ್ತು ಹೆಚ್ಚು ರೈಲು ಸಂಚಾರ ವಿರುವ ಮಾರ್ಗಗಳಲ್ಲಿ ಸ್ವಯಂಚಾಲಿತ ರಕ್ಷಣಾ ವ್ಯವಸ್ಥೆಯನ್ನು ಜಾರಿಗೊಳಿಸುತ್ತೇವೆ. ಬೆಂಗಳೂರು ನಮ್ಮ ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ರೂ. 14,788 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!