ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ರಾಜ್ಯ ಬಜೆಟ್ 2022: 438 ‘ನಮ್ಮ ಕ್ಲಿನಿಕ್‘ಗಳ ಸ್ಥಾಪನೆ; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?

ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ರಾಜಧಾನಿಯ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 ‘ನಮ್ಮ ಕ್ಲಿನಿಕ್‘ಗಳನ್ನು ಸ್ಥಾಪನೆ ಮಾಡಲಾಗುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ರಾಜಧಾನಿಯ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 ‘ನಮ್ಮ ಕ್ಲಿನಿಕ್‘ಗಳನ್ನು ಸ್ಥಾಪನೆ ಮಾಡಲಾಗುವುದಾಗಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ 2022–23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಅವರು, ‘ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ’ ಎಂಬ ಧ್ಯೇಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಕೊಡುಗೆಗಳ ಬಗ್ಗೆ ಉಲ್ಲೇಖಿಸಿದರು.

ಈ ಬಾರಿಯ ಬಜೆಟ್ ನಲ್ಲಿ ಆರೋಗ್ಯಕ್ಕೆ ಸಿಕ್ಕಿದ್ದೇನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ..

ಎಲ್ಲರಿಗೂ ಆರೋಗ್ಯ; ಎಲ್ಲೆಡೆಯೂ ಆರೋಗ್ಯ:
• ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 "ನಮ್ಮ ಕ್ಲಿನಿಕ್"ಗಳ ಸ್ಥಾಪನೆ.
• ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ.  
• ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ.  
• ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.
• ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.
• ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Infusion Center ಗಳನ್ನು ಸ್ಥಾಪಿಸಲಾಗುವುದು.
• ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
• ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.
• ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ.
• ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‍ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮಥ್ರ್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.
• “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.
• ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.

ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:

  • ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ.
  • ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.
  • ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ

ಅಪೌಷ್ಟಿಕತೆ ನಿವಾರಣೆಗೆ ಒತ್ತು

  • ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.
  • ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಫೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ