ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗೌರವ ಧನ ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.
ಇದರ ಜತೆಗೆ, ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000 ರೂಪಾಯಿಯಿಂದ 1500 ರೂಗಳ ಹೆಚ್ಚಳ ಮಾಡಲಾಗುವುದು. ಪ್ರವಾಸಿ ಗೈಡ್ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.