ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2022: 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು; ಕವಚ್ ಅಡಿ 2,000 ಕಿಮೀ ರೈಲ್ವೇ ಜಾಲ ನಿರ್ಮಾಣ

Srinivasamurthy VN

ನವದೆಹಲಿ: ಸಂಸತ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಕೇಂದ್ರ ಬಜೆಟ್ 2022 (Budget  2022)ನಲ್ಲಿ ರೈಲ್ವೇ ಇಲಾಖೆಗೆ ಮಹತ್ವದ ಘೋಷಣೆ ಮಾಡಲಾಗಿದೆ.

ದೇಶದಲ್ಲಿ ಒಟ್ಟು 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗಲಿದ್ದು, ಸಮಯಪಾಲನೆ ಮತ್ತು ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು ಈ ರೈಲುಗಳು ಒದಗಿಸುತ್ತವೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. 100 ಪಿಎಂ ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಮುಂದಿನ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕವಚ್ ಅಡಿ 2,000 ಕಿಮೀ ರೈಲ್ವೇ ಜಾಲ ನಿರ್ಮಾಣ
ಅಂತೆಯೇ ರೈಲ್ವೆಯ ಸುರಕ್ಷತೆ ಮತ್ತು ಸಾಮರ್ಥ್ಯ ವರ್ಧನೆಗಾಗಿ 2,000 ಕಿಮೀ ರೈಲು ಜಾಲವನ್ನು ಸ್ಥಳೀಯ ವಿಶ್ವ ದರ್ಜೆಯ ತಂತ್ರಜ್ಞಾನ ಕವಚ್ ಅಡಿಯಲ್ಲಿ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
 

SCROLL FOR NEXT